ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ನಿಶ್ಚಿತ

ex cm b.s.Yeddyurappa
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Published on

ಶಿವಮೊಗ್ಗ: ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಹಿಂದೆ ಯಾವ ರೀತಿ ಬೆಂಬಲ ಕೊಟ್ಟಿದ್ದರೂ ಮೂರು ಉಪ ಚುನಾವಣೆಯಲ್ಲೂ ಅದೇ ರೀತಿ ಬೆಂಬಲ ಕೊಟ್ಟಿದ್ದಾರೆ. ಚುನಾವಣೆ ಪೂರ್ವವೇ ಹೇಳಿದ್ದೇನೆ. ಈಗಲೂ ಹೇಳುತ್ತೇನೆ. ನಮ್ಮ ಅಭ್ಯರ್ಥಿಗಳೇ ಗೆಲ್ಲುತ್ತಾರೆ ಎಂದರು.

ವಕ್ಫ್ ಮಂಡಳಿ ವಿರುದ್ಧ ಹೋರಾಟಕ್ಕೆ ಅಣಿಯಾಗಲು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೂರು ಕಮಿಟಿಗಳನ್ನು ಘೋಷಣೆ ಮಾಡಿದ್ದಾರೆ. ಎಲ್ಲರೂ ರಾಜ್ಯಾದ್ಯಂತ ಪ್ರವಾಸ ಮಾಡಿ ವರದಿ ನೀಡಲಿದ್ದಾರೆ. ಆ ಎಲ್ಲ ವರದಿಗಳನ್ನು ಕ್ರೂಢೀಕರಿಸಿಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದ ಅವರು, ಬಿಜೆಪಿಯವರು ಕಾಂಗ್ರೆಸ್‌ನ ಶಾಸಕರನ್ನೂ ಸಂಪರ್ಕಿಸಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಅರ್ಥವಿಲ್ಲ. ಆ ರೀತಿ ಯಾಕೆ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net