

ಮೂಡುಬಿದಿರೆ: ಎನ್‌ಡಿಎ(ನ್ಯಾಶನಲ್ ಡಿಫೆನ್ಸ್ ಅಕಾಡೆಮಿ) ಲಿಖಿತ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಪ್ರಮುಖ್, ದಿವ್ಯೇಶ್ ತೇರ್ಗಡೆಯಾದವರು. ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಅಭಿನಂದಿಸಿದ್ದಾರೆ.