

ಆಲೂರು: ಭಾರತದ ಸಂವಿಧಾನವು ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠವಾಗಿದ್ದು, ಪ್ರತಿಯೊಬ್ಬರಿಗೂ ಸಮಾನವಾಗಿ ಬದುಕುವ ಹಕ್ಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎ.ಟಿ.ಮಲ್ಲೇಶ್ ತಿಳಿಸಿದರು.
ಪಟ್ಟಣದ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಹಾಗಾಗಿ ಮಕ್ಕಳಲ್ಲಿ ಸಂವಿಧಾನದ ಉದ್ದೇಶ ಅರ್ಥವಾಗಬೇಕು. ಹಾಗಾಗಿ ಸರ್ಕಾರ ಸಂವಿಧಾನ ಪೀಠಿಕೆ ದಿನ ಆಚರಣೆ ಮುಂದಾಗಿದೆ. ಮೂಲಭೂತ ಹಕ್ಕುಗಳು ಎಲ್ಲರಿಗೂ ಗೊತ್ತಿದೆ. ಆದರೆ ಕರ್ತವ್ಯಗಳನ್ನು ಯಾರೂ ಪಾಲಿಸುತ್ತಿಲ್ಲ. ಪ್ರಜಾಪ್ರಭುತ್ವದ ಯಶಸ್ಸು ಪೀಠಿಕೆಯಲ್ಲಿದೆ. ಸಂವಿಧಾನದ ಪೀಠಿಕೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಎಲ್ಲರೂ ಸೋದರತೆಯಿಂದ ಬಾಳಲು ಇದು ಉಪಯೋಗ. ಇದು ಮುಂದಿನ ಪೀಳಿಗೆಗೆ ಅರ್ಥ ಆಗಬೇಕು. ಜಾತಿ, ಧರ್ಮಗಳ ನಡುವೆ ಸಂಘರ್ಷ ತಪ್ಪಿಸಬೇಕು. ಈ ಉದ್ದೇಶ ಇಟ್ಟುಕೊಂಡೇ ಡಾ.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ, ಪ್ರಪಂಚದಲ್ಲಿ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ.ಕೃಷ್ಣೇಗೌಡ, ಸಮಾಜ ಕಲ್ಯಾಣಾಧಿಕಾರಿ ಪಿ.ಎಚ್.ಲಿಂಗರಾಜು, ದಲಿತ ಮುಖಂಡರಾದ ದೇವರಾಜ್, ಅಜ್ಜೇನಹಳ್ಳಿ ರಂಗಯ್ಯ, ಡಾ.ಎಚ್.ಆರ್.ತಿಮ್ಮಯ್ಯ, ಶಿಕ್ಷಕಿಯರಾದ ವೇದಾವತಿ, ರವಿತಾ ಇತರರು ಇದ್ದರು.