

ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ 2024-25ನೇ ಸಾಲಿನ ಕಾರ್ಯಾದೇಶದಂತೆ ಮಳೆಹಾನಿ ಕಾಮಗಾರಿಗಳು ರಾಷ್ಟಿçÃಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಅನುದಾನದಿಂದ ನಡೆಯುತ್ತಿದ್ದು, ಜಿಲ್ಲೆಯ ಕಾಂಗ್ರೆಸಿಗರು ಈ ಕಾಮಗಾರಿಗಳನ್ನು ರಾಜ್ಯ ಸರ್ಕಾರದ ಅನುದಾನದಿಂದ ಕೈಗೆತ್ತಿಕೊಳ್ಳಲಾಗಿದೆ ಎಂದು ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ದಿಶಾ ಸಮಿತಿ ಸದಸ್ಯ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ.
ಎನ್‌ಡಿಆರ್‌ಎಫ್ ಶೇ.75ರಷ್ಟು ಅನುದಾನ ನೀಡಿದರೆ ಉಳಿದ ಶೇ.25ನ್ನು ರಾಜ್ಯ ಸರ್ಕಾರ ನೀಡಬೇಕಾಗುತ್ತದೆ. 2024-25ನೇ ಸಾಲಿನಲ್ಲಿ ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆಯ ರಸ್ತೆ ದುರಸ್ತಿಯ 495 ಕಾಮಗಾರಿಗಳಿಗೆ ಎನ್‌ಡಿಆರ್‌ಎಫ್ ಮೂಲಕ 14.83 ಕೋಟಿ ರೂ. ಮೀಸಲಿಟ್ಟಿದ್ದು, ಶೇ.75ರ ಅನುಪಾತದಲ್ಲಿ 11.12 ಕೋಟಿ ರೂ. ಬಿಡುಗಡೆ ಆಗಿದೆ. ಮಡಿಕೇರಿ ನಗರಸಭೆ ವ್ಯಾಪ್ತಿಯ ರಸ್ತೆ ದುರಸ್ತಿಯ 14 ಕಾಮಗಾರಿಗಳಿಗೆ 30 ಲಕ್ಷ ರೂ. ನಿಗದಿಯಾಗಿದ್ದು, 22.50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ ಪುರಸಭೆ ವ್ಯಾಪ್ತಿಯ 18 ರಸ್ತೆ ದುರಸ್ತಿ ಕಾಮಗಾರಿಗೆ 10.20 ಲಕ್ಷ ರೂ. ಮೀಸಲಿಟ್ಟಿದ್ದು, 7.65 ಲಕ್ಷ ಬಿಡುಗಡೆಯಾಗಿದೆ. ವಿರಾಜಪೇಟೆ ಪುರಸಭೆ ವ್ಯಾಪ್ತಿಯ ರಸ್ತೆ ದುರಸ್ತಿಯ 13 ಕಾಮಗಾರಿಗಳಿಗೆ 12.90 ಲಕ್ಷ ನಿಗಧಿಯಾಗಿದ್ದು, 9.68 ಲಕ್ಷ ಬಿಡುಗಡೆಯಾಗಿದೆ. ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 6 ರಸ್ತೆ ದುರಸ್ತಿ ಕಾಮಗಾರಿಗೆ 5.70 ಲಕ್ಷ ರೂ. ನಿಗಧಿಯಾಗಿದ್ದು, 4.28 ಲಕ್ಷ ರೂ. ಬಿಡುಗಡೆಯಾಗಿದೆ.
ಲೋಕೋಪಯೋಗಿ ಇಲಾಖೆಗೆ ಸಂಬAಧಿಸಿದAತೆ ರಸ್ತೆ ದುರಸ್ತಿಯ 74 ಕಾಮಗಾರಿಗಳಿಗೆ 2.11 ಕೋಟಿ ರೂ. ಮೀಸಲಿಟ್ಟಿದ್ದು, 1.58 ಕೋಟಿ ರೂ. ಬಿಡುಗಡೆಯಾಗಿದೆ. ಸೆಸ್ಕ್ ಇಲಾಖೆಗೆ ಸಂಬAಧಿಸಿದAತೆ 3,137 ವಿದ್ಯುತ್ ಕಂಬಗಳ ಬದಲಾವಣೆ ಮತ್ತು 2.20 ಕಿ.ಮೀ ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯಕ್ಕಾಗಿ 1.57 ಕೋಟ್ಷಿ ರೂ. ಮಂಜೂರಾಗಿದ್ದು, ಸಂಪೂರ್ಣ ಹಣ ಬಿಡುಗಡೆಯಾಗಿದೆ.
ಹೀಗೆ ಒಟ್ಟು 620 ಕಾಮಗಾರಿಗಳಿಗೆ 19.11 ಕೋಟಿ ರೂ. ಮಂಜೂರಾಗಿದ್ದು, 14.73 ಕೋಟಿ ರೂ. ಬಿಡುಗಡೆಯಾಗಿದೆ. ಅತಿಯಾದ ಮಳೆಯಿಂದ ಅಕಾಲಿಕವಾಗಿ ಮೃತಪಟ್ಟ ವಿರಾಜಪೇಟೆಯ ವಿಷ್ಣು ಬೆಳ್ಯಪ್ಪ ಹಾಗೂ ಗೌರಿ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳನ್ನು ಪರಿಹಾರವಾಗಿ ಎನ್‌ಡಿಆರ್‌ಎಫ್ ಅನುದಾನದಿಂದ ನೀಡಲಾಗಿದೆ.
ಬಹುತೇಕ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತು ಪರಿಹಾರಕ್ಕೆ ಎನ್‌ಡಿಆರ್‌ಎಫ್ ಅನುದಾನದ ಮೂಲಕವೇ ಹಣ ಹಂಚಿಕೆಯಾಗುತ್ತಿದೆ. ಆದರೆ ಇದನ್ನು ಬಹಿರಂಗಪಡಿಸದ ಕಾಂಗ್ರೆಸ್ಸಿಗರು ರಾಜ್ಯ ಸರ್ಕಾರದ ಅನುದಾನವೆಂದು ಪ್ರತಿಬಿಂಬಿಸಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ರಾಕೇಶ್ ದೇವಯ್ಯ ಆರೋಪಿಸಿದ್ದಾರೆ.