

ಮಂಗಳೂರು: ಉಡುಪಿಯಲ್ಲಿ ಅರೆವೈದ್ಯಕೀಯ ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್ ಚಿತ್ರೀಕರಣ ನಡೆದಿದೆ ಎನ್ನಲಾದ ಘಟನೆ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿ, ಅದರ ಕಾವು ಆರುವ ಮುನ್ನವೇ ನೆರೆಮನೆಯ ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಬಂಧಿತ.
ಕೆಮ್ರಾಲ್ ಪಕ್ಷಿಕೆರೆ ಹೊಸಕಾಡು ನಿವಾಸಿ ಪ್ರಜ್ವಲ್ ಅವರು ಸ್ನಾನಕ್ಕೆ ತೆರಳಿದಾಗ ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಅನುಮಾನದ ಮೇಲೆ ಹೊರಗೆ ಬಂದು ಆರೋಪಿಯನ್ನು ಹಿಡಿದು ವಿಚಾರಣೆ ನಡೆಸಿದಾಗ ಪ್ರಕರಣ ಹೊರಗೆ ಬಂದಿದೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಆರೋಪಿ ಕಟ್ಟಿಗೆ ಕಡಿಯುವ ಕೆಲಸ ಮಾಡುತ್ತಿದ್ದಾನೆ. ಸುಮಂತ್ ತನ್ನ ನೆರೆಮನೆಯ ಪ್ರಜ್ವಲ್‌ನ ಮನೆಯಲ್ಲಿರುವ ಮಹಿಳೆಯರ ವಿಡಿಯೋ ಚಿತ್ರೀಕರಣ ಉದ್ದೇಶ ಹೊಂದಿದ್ದ. ಆದರೆ ಪ್ರಜ್ವಲ್ ರಾತ್ರಿ 11 ಗಂಟೆ ವೇಳೆ ಶೌಚಾಲಯಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ೆನ್ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ 18 ಸೆಕೆಂಡ್‌ನ ಒಂದು ವೀಡಿಯೊ ಮಾತ್ರ ಕಂಡು ಬಂದಿದೆ. ಮೊಬೈಲ್‌ನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಮಾಹಿತಿ ನೀಡಿದ್ದಾರೆ.