

ಮದ್ದೂರು: ತಾಲೂಕಿನ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.
ಅಗರಲಿಂಗನದೊಡ್ಡಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 47 ಲಕ್ಷ ರೂ.ವೆಚ್ಚದಲ್ಲಿ 3 ಕೊಠಡಿಗಳಿಗೆ ಭೂಮಿಪೂಜೆ ನೆರವೇರಿಸಿ ಮಂಗಳವಾರ ಮಾತನಾಡಿದರು. ಸರ್ಕಾರಿ ಶಾಲೆಗಳು ಉಳಿಸಬೇಕು ಎಂಬ ಉದ್ದೇಶದಿಂದ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಅಗರಲಿಂಗನದೊಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನಿವೇಶನ ಮತ್ತು ಕಟ್ಟಡ 2019-20ನೇ ಸಾಲಿನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇ ನಿರ್ಮಾಣಕ್ಕಾಗಿ ಸ್ವಾಧೀನಕ್ಕೆ ಒಳಪಟ್ಟಿತ್ತು. ಆದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ 3 ಕೊಠಡಿಗಳಿರುವ ಹೊಸ ಸರ್ಕಾರಿ ಶಾಲೆಯನ್ನು ನಿರ್ಮಾಣ ಮಾಡಿ ಅನುಕೂಲ ಕಲ್ಪಿಸಲಾಗುತ್ತಿದೆ ಎಂದರು.
ಬಿಇಒ ಸಿ.ಎಚ್.ಕಾಳೀರಯ್ಯ, ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್, ಮುಖಂಡರಾದ ಪುಟ್ಟಪ್ಪ, ದಾಸಲಿಂಗ, ಬೊಮ್ಮೇಗೌಡ, ರವಿ, ಸತೀಶ್, ಕೃಷ್ಣ ಇದ್ದರು.