

ಬೆಳಗಾವಿ: ಇಲ್ಲಿನ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ಮದ್ಯಸಾರ ಮತ್ತು ಸಕ್ಕರೆ ತಂತ್ರಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಲಾಗುವುದು ಎಂದು ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ನಗರದ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಕ್ಕರೆ ಕಾರ್ಖಾನೆಗಳಿಗೆ 2023&24ನೇ ಸಾಲಿನ ಹಂಗಾಮಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪದವಿ ಕೋರ್ಸ್ ಆರಂಭಿಸಲು 20 ಕೋಟಿ ರೂ. ವೆಚ್ಚದಲ್ಲಿ ಕಾಲೇಜು ಕಟ್ಟಡ ನಿರ್ಮಿಸಲಾಗುವುದು ಎಂದರು.
ಮಹಾರಾಷ್ಟ್ರ ಸಕ್ಕರೆ ಉದ್ಯಮಕ್ಕೆ ಸ್ಪರ್ಧೆ ನೀಡುವುದು ಸರ್ಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಅಗತ್ಯ ನೆರವು ನೀಡಲಾಗುವುದು. ಕೇಂದ್ರ ಸರ್ಕಾರ ಎಥೆನಾಲ್ ಸೇರಿ ಹಲವು ಹೊಸ ಯೋಜನೆ ೂಷಿಸಿದೆ. ಈ ಸೌಲಭ್ಯ ಬಳಸಿಕೊಂಡು ರಾಜ್ಯದ ಸಕ್ಕರೆ ಕಾರ್ಖಾನೆಗಳು ಮಾದರಿ ಆಗಬೇಕು ಎಂದರು.
ಕಾರ್ಖಾನೆಗಳಿಗೆ ಸಕ್ಕರೆ ರ್ತು ಮಾಡಲು ಅನುಮತಿ ಇದ್ದರೆ ಕಬ್ಬು ಬೆಳೆಗಾರರಿಗೆ ಬಾಕಿ ಬಿಲ್ ಪಾವತಿಸಲು
ಸಮಸ್ಯೆಯಾಗದು. ರಫ್ತಿಗೆ ಅನುಮತಿ ನೀಡದ ಕಾರಣ ಹಲವು ಕಾರ್ಖಾನೆಗಳು ರೈತರಿಗೆ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿವೆ. ಬಿಲ್ ಪಾವತಿಸಲು ಕಾರ್ಖಾನೆಗಳ ಬಳಿ ಪ್ರತ್ಯೇಕ ಬಂಡವಾಳ ಇರುವುದಿಲ್ಲ. ಕೇಂದ್ರ ಸರ್ಕಾರ ಇದನ್ನು ಮನಗಂಡು ರೈತರ ಹಿತರಣೆಯ ಪೂರಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಥಣಿ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ, ಸಕ್ಕರೆ ಸಂಸ್ಥೆಯ ನಿರ್ದೇಶಕ ರಾಜಗೋಪಾಲ, ಮಲ್ಲನಗೌಡ ಪಾಟೀಲ, ಅಭಿನಂದನ ಪಾಟೀಲ, ಅಭಯ ಸರನಾಯಕ, ವಿ.ಜೆ.ರವಿ ಇತರರಿದ್ದರು.
ಸಕ್ಕರೆ ರಫ್ತು ಮಾಡಲು ಕಾರ್ಖಾನೆಗಳಿಗೆ ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದು, ಇದಕ್ಕೆ ಅನುಮತಿ ನೀಡಿದರೆ ಮಾತ್ರ ಕಬ್ಬು ಬೆಳೆಗಾರರ ಹಿತರಣೆ ಸಾಧ್ಯ. ಶಿವಾನಂದ ಪಾಟೀಲ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ