ಅಣ್ಣೂರು ಅಭಿವೃದ್ಧಿಗೆ ಅಗತ್ಯ ಅನುದಾನ

22KMD-1
ಅಣ್ಣೂರು ಗ್ರಾಮದಲ್ಲಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕದಲೂರು ಉದಯ್ ಭೂಮಿ ಪೂಜೆ ನೆರವೇರಿಸಿದರು.
Published on

 ಕೆ.ಎಂ.ದೊಡ್ಡಿ: ಅಣ್ಣೂರು ಮಾದರಿ ಗ್ರಾಮವಾಗಿ ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ನೀಡಲಾಗುವುದು ಎಂದು ಶಾಸಕ ಕದಲೂರು ಉದಯ್ ಭರವಸೆ ನೀಡಿದರು.

ಸಮೀಪದ ಅಣ್ಣೂರು ಗ್ರಾಮದಲ್ಲಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಅಣ್ಣೂರು ಗ್ರಾಮದ ಅಭಿವೃದ್ಧಿಗೆ ಸುಮಾರು 2 ಕೋಟಿ ರೂ. ಅನುದಾನವನ್ನು ನೀಡಿದ್ದು, ಗ್ರಾಮಗಳಲ್ಲಿರುವ ದೇವಾಲಯಗಳು, ರಸ್ತೆಗಳ ಅಭಿವೃದ್ಧಿಗೆ ಅನುದಾನಗಳನ್ನು ನೀಡಲಾಗಿದೆ. ಗ್ರಾಮದಲ್ಲಿ ಸಾಕಷ್ಟು ವರ್ಷಗಳಿಂದ ನಿರ್ಲಕ್ಷಿಸಿದ್ದ ಸ್ಮಶಾನವನ್ನು 1 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿಪಡಿಸಿ ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಗ್ರಾಮದಲ್ಲಿ ಚುನಾವಣಾ ಪೂರ್ವದಲ್ಲಿ ನಾನು ನಮ್ಮ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಲವು ಸಮುದಾಯಗಳ ದೇವಾಲಯಗಳ ಜೀರ್ಣೋದ್ಧಾರಕ್ಕೆ ಸಹಾಯ ಮಾಡಿದ್ದು ಹಾಗೆಯೇ ಗ್ರಾಮದ ಹಲವಾರು ಮಂದಿಗೆ ಸಹಾಯಹಸ್ತ ನೀಡಲಾಗಿತ್ತು. ಈ ನಿಟ್ಟಿನಲ್ಲಿ ನನಗೆ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ನೀಡಿ ನಿಮ್ಮ ಸೇವೆಗೆ ಅವಕಾಶ ನೀಡಿದ್ದಕ್ಕಾಗಿ ಕೃತಜ್ಞತೆ ಮನೋಭಾವದಿಂದ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಶ್ರಮಿಸುಲಾಗುವುದು ಎಂದರು.

ಗ್ರಾಮದ ಪರಿಮಿತಿಯಲ್ಲಿರುವ ರಸ್ತೆಗಳ ಅಗಲಿಕರಣಕ್ಕೆ ಗ್ರಾಮಸ್ಥರು ಸಹಕರಿಸಬೇಕು ಗ್ರಾಮಗಳ ರಸ್ತೆಗಳ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದ ಅವರು, ರಸ್ತೆ ಕಾಮಗಾರಿ ಆರಂಭಿಸುವಾಗ ಉತ್ತಮ ಗುಣಮಟ್ಟದ ಕಾಮಗಾರಿಯನ್ನ ನಿಗದಿತ ವೇಳೆಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಯಿತು.

ಸೂಳೆಕೆರೆ ಜಲಾನಯನ ಪ್ರದೇಶಗಳಲ್ಲಿನ ಕಾಲುವೆಗಳ ಅಭಿವೃದ್ಧಿಗಾಗಿ ಸುಮಾರು 73 ಕೋಟಿ ರೂ. ವೆಚ್ಚದಲ್ಲಿ ಕಾಲುವೆಗಳ ಅಭಿವೃದ್ಧಿ ಅನುದಾನ ಬಿಡುಗಡೆಯಾಗಿದ್ದು, ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಮನ್‌ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾಯಿತರಾಗಿರುವ ಮಾರಸಿಂಗನಹಳ್ಳಿ ಹರೀಶ್ ರವರನ್ನು ಅಣ್ಣೂರು ಗ್ರಾಮಸ್ಥರು ಹಾಗೂ ಹಾಲು ಉತ್ಪಾದಕ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಜಿ.ಪಂ. ಮಾಜಿ ಸದಸ್ಯ ಎ.ಎಸ್. ರಾಜೀವ್, ತಾ.ಪಂ. ಮಾಜಿ ಸದಸ್ಯ ರೈತ ಸಂಘದ ರಾಜಣ್ಣ, ಉಪಾಧ್ಯಕ್ಷ ನಾಗರಾಜು, ಮಾಜಿ ಅಧ್ಯಕ್ಷರಾದ ಮರಿಚನ್ನೇಗೌಡ, ಶೇಖರ್, ಚಂದ್ರಶೇಖರ್, ಸ್ಟೋರ್ ಜಯರಾಮು, ವರದರಾಜು, ನಾಗಮಣಿ ಮಹೇಂದ್ರ, ಸದಸ್ಯರಾದ ಸತೀಶ್, ಸೊಸೈಟಿ ಅಧ್ಯಕ್ಷ ಪ್ರಸನ್ನ, ಡೈರಿ ಅಧ್ಯಕ್ಷ ಬೊಮ್ಮಾಯಿ, ಮುಖಂಡರಾದ ಆಟೋಪಾರ್ಟ್ಸ್ ವರದರಾಜು, ಮನೋಹರ್, ರಾಘವೇಂದ್ರ, ವೀರೇಂದ್ರ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net