ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆಯಾಗಲಿ: ಶಿವಾನಂದ

raichur
raichur
Published on

ರಾಯಚೂರು ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಘೋಷವಾಕ್ಯದಡಿ ಜೂ.21ರಂದು ಆಚರಿಸಲ್ಪಡುವ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಡಿಸಿ ಶಿವಾನಂದ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ 11ನೇ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆಯ ನಿಮಿತ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಜೂ.21ರ ಬೆಳಗ್ಗೆ 6.30ಕ್ಕೆ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಯೋಗ ಶಿಬಿರ ಆಯೋಜಿಸಲಾಗಿದೆ. 6 :45 ರಿಂದ 7 ಗಂಟೆವರೆಗೆ ಧ್ಯಾನ, 7 ಗಂಟೆಯಿಂದ 7.45ರವರೆಗೆ ಯೋಗ ಪ್ರದರ್ಶನ, 8 ರಿಂದ 8.30ರವರೆಗೆ ವೇದಿಕೆಯ ಕಾರ್ಯಕ್ರಮ ನಡೆಯಲಿದೆ.

ವಿಶ್ವದಲ್ಲಿ ಸಾರ್ವತ್ರಿಕವಾಗಿ ಅಂತಾರಾಷ್ಟ್ರೀಯ ಯೋಗ ದಿನ ಎಂದು ಆಯೋಜಿಸಲಾಗುತ್ತಿದೆ. ಅನಾದಿಕಾಲದಿಂದಲೂ ಯೋಗ ಸಾಧನೆಗೆ ಅತಿ ಮಹತ್ವವಿದೆ. ಇಂದಿನ ಜಗತ್ತು ದೈಹಿಕ ಮತ್ತು ಮಾನಸಿಕ ಆರೋಗ್ಯದ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಜನಸಾಮಾನ್ಯರನ್ನು ಇದು ತೀವ್ರವಾಗಿ ಕಾಡುತ್ತಿದೆ. ಇದಕ್ಕೆ ಸುಲಭೋಪಾಯ ಯೋಗ ಮಾತ್ರ ಆಗಿದೆ. ದೀರ್ಘಕಾಲದವರೆಗೆ ಆರೋಗ್ಯವಂತರಾಗಿ ಬಾಳಲು ಯೋಗ ಅತ್ಯಂತ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಸ್ವಾಸ್ಥ್ಯ ಸಮಾಜದ ಪರಿಕಲ್ಪನೆಗಾಗಿ ಜಿಲ್ಲಾಡಳಿತ ವತಿಯಿಂದ ಯೋಗ ಶಿಬಿರ ಆಯೋಜಿಸಲಾಗಿದ್ದು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕ ಹಾಗೂ ಯುವತಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು ಮನವಿ ಮಾಡಿದರು.

ಯೋಗ ದಿನಾಚರಣೆಯ ಅಂಗವಾಗಿ ಜೂ.18ರಂದು ಬೆಳಗ್ಗೆ 9 ಗಂಟೆಗೆ ಮಹಿಳೆಯರು ಮತ್ತು ಪುರುಷರಿಗೆ ವಯೋ ಆಧರಿತ ಯೋಗ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯೋಗ ಕುರಿತು ಪ್ರಬಂಧ ಸ್ಪರ್ಧೆಯನ್ನು ಮಧ್ಯಾಹ್ನ 2 ಗಂಟೆ ವೇಳೆಗೆ ಜಿಲ್ಲಾ ಅಯುಷ್ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ನೋಂದಣಿಗಾಗಿ ಡಾ.ತಿಮ್ಮಪ್ಪ ವಡ್ಡೆಪಲ್ಲಿ ಮೊ:9900778049 ಇವರಿಗೆ ಸಂಪರ್ಕಿಸಲು ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಶಂಕರಗೌಡ, ಪಿಯು ಡಿಡಿಡಪಿಐ ಕೆ.ಕೊಟ್ರಬಸಪ್ಪ, ಬಿಇಓ ಪರಶುರಾಮ, ಭಾರತ ಸೇವಾ ದಳದ ಶಿವಕುಮಾರ, ಭಾರತ ಸ್ಕೌಟ್ ಮತ್ತು ಗೈಡ್ಸನ ಮಹಮ್ಮದ ಶಫುದ್ದೀನ್, ಸಹಜ ಯೋಗ ಪ್ರತಿಷ್ಠಾನದ ನರಸಯ್ಯ, ಮಲ್ಲಿಕಾರ್ಜುನ ಸ್ವಾಮಿ, ರಮೇಶ್, ಸಿದ್ಧಾರ್ಥ, ಯೋಗಾ ಅಸೋಸಿಯೇಶನ್‌ನ ಡಾ.ತಿಮ್ಮಯ್ಯ, ವೈಟಿಪಿಎಸ್‌ನ ಗಂಗಾಧರ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net