ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆಯಾಗಲಿ: ಜಿಲ್ಲಾಧಿಕಾರಿ ನಿತೀಶ್ ಕೆ

raichur
raichur
Published on

ರಾಯಚೂರು ಜಿಲ್ಲಾಡಳಿತ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಚರಿಸಲ್ಪಡುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ. ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಸಂಜೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಯಂತ್ಯುತ್ಸವ ನಿಮಿತ್ತ ಅ.7ರಂದು ನಗರದ ಸರ್ಕಾರಿ ಪದವಿ ಕಾಲೇಜ್ ಹತ್ತಿರದ ವಾಲ್ಮೀಕಿ ವೃತ್ತದಲ್ಲಿನ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಗಣ್ಯರಿಂದ ಪುಷ್ಪಾರ್ಚನೆ ನಡೆಯಲಿದ್ದು,

ವಾಲ್ಮೀಕಿ ವೃತ್ತ ಸೇರದಂತೆ ನಗರದ ಎಲ್ಲಾ ಮಹನಿಯರ ವೃತ್ತಗಳನ್ನು ವಿದ್ಯುದ್ವೀಪಗಳಿಂದ ಅಲಂಕರಿಸಬೇಕು. ನಗರದ ಆಶಾಪೂರ ರಸ್ತೆಯ ವಾಲ್ಮೀಕಿ ಭವನದವರೆಗೆ ಮೆರವಣಿಗೆ ನಡೆಯಲಿದ್ದು, ಎಲ್ಲಾ ರಸ್ತೆಗಳಲ್ಲಿ ಶುಚಿತ್ವ ಇರುವಂತೆ ನೋಡಿಕೊಳ್ಳಬೇಕು.

ಮಹಿಳೆಯರಿಂದ ಕುಂಭ ಮೆರವಣಿಗೆ ಸಹಿತ ಮೆರವಣಿಗೆ ಸಾಗುವ ಮಾರ್ಗದಲ್ಲಿ ಸೂಕ್ತ ಪೊಲೀಸ ಬಂದೋಬಸ್ತ್ ವ್ಯವಸ್ಥೆಯಾಗಬೇಕೆಂದು ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಮೆರವಣಿಗೆಗೆ ಜಾನಪದ ಕಲಾ ತಂಡಗಳ ವ್ಯವಸ್ಥೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು. ಆಮಂತ್ರಣ ಪತ್ರಿಕೆಗಳನ್ನು ಶಿಚ್ಟಾಚಾರದಂತೆ ಮುದ್ರಿಸಿ ಗಣ್ಯರಿಗೆ ತಲುಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಓ ಈಶ್ವರ್ ಕುಮಾರ ಕಾಂದೂ, ಪುರುರಾಜ್ ಸಿಂಗ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ವಾಲ್ಮೀಕಿ ಸಮಾಜದ ಮುಖಂಡರಾದ ಎನ್.ರಘುವೀರ ನಾಯಕ, ಗಿರಿಯಪ್ಪ ನಾಯಕ, ರಾಮು ನಾಯಕ, ಕರಿಯಪ್ಪ ನಾಯಕ, ನರೇಂದ್ರ ನಾಯಕ, ಭೀಮರಾಯ ವಕೀಲರು, ರವಿಕುಮಾರ ಅಸ್ಕಿಹಾಳ, ವೆಂಕಟೇಶ ಅಸ್ಕಿಹಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net