ಪ್ರಶಿಕ್ಷಣಾರ್ಥಿಗಳಿಗೂ ಕೌಶಲ ಅಗತ್ಯ

CTD 02 Bapuji-03
Published on

ಚಿತ್ರದುರ್ಗ: ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ವಿಯಾಗಲು ಪ್ರಶಿಕ್ಷಣಾರ್ಥಿಗಳೂ ಕೌಶಲ ಮೈಗೂಡಿಸಿಕೊಳ್ಳಬೇಕು ಎಂದು ದಾವಣಗೆರೆ ವಿವಿ ಇತಿಹಾಸ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ವೆಂಕಟರಾವ್ ಪಾಲಾಟೆ ಸಲಹೆ ನೀಡಿದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರ‌್ಯಾಂಕ್ ವಿಜೇತರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಬೋಧನೆಯಲ್ಲಿ ನೈಪುಣ್ಯ ಹೆಚ್ಚಿಸಿಕೊಳ್ಳಲು ಕನಿಷ್ಠ ನಿತ್ಯ 15 ಗಂಟೆ ಶೈಕ್ಷಣಿಕ ಅಭ್ಯಾಸದಲ್ಲಿ ನಿರತರಾಗಬೇಕು. ವಿದ್ಯಾರ್ಥಿಗಳ ಗಮನಸೆಳೆಯಲು ಆಧುನಿಕತೆಗೆ ತಕ್ಕಂತೆ ಬದಲಾಗಬೇಕು ಎಂದರು. ಸಂಸ್ಥೆಯ ಕಾರ್ಯದರ್ಶಿ ಕೆ.ಎಂ.ವೀರೇಶ್, ಪ್ರಾಚಾರ್ಯೆ ಎಂ.ಆರ್.ಜಯಲಕ್ಷ್ಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net