ಶುಕ್ರವಾರ ನೀಮಾ ಕೊಡಗು ಜಿಲ್ಲಾ ಘಟಕದ ಬೆಳ್ಳಿ ಮಹೋತ್ಸವ

neema
Published on

ಮಡಿಕೇರಿ:

ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ನೀಮಾ) ಕೊಡಗು ಜಿಲ್ಲಾ ಘಟಕದ ವತಿಯಿಂದ ಧನ್ವಂತರಿ ಜಯಂತಿ ಮತ್ತು ಬೆಳ್ಳಿ ಮಹೋತ್ಸವ ಸಮಾರಂಭ ಅ.18 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ನೀಮಾ ಅಧ್ಯಕ್ಷ ಡಾ. ಎ.ಆರ್. ರಾಜಾರಾಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಲ್ಲಿನ ಶ್ರೀ ಲಕ್ಷಿö್ಮÃ ನರಸಿಂಹ ಕಲ್ಯಾಣ ಮಂಟಪದಲ್ಲಿ ಅಂದು ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಧನ್ವಂತರಿ ಹವನ ನಡೆಯಲಿದೆ. 10 ಗಂಟೆಗೆ ಗಣ್ಯರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೀಮಾದ ಮಾಜಿ ಅಧ್ಯಕ್ಷರು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಉಕ್ಕಿನಡ್ಕ ಡಾ. ಯು. ಜಯಗೋವಿಂದ ಸಮಾಜದ ಮೇಲೆ ನೀಮಾದ ಪ್ರಭಾವ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ನೀಮಾ ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ ಹೊರ ತರಲಾಗುತ್ತಿರುವ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರು ಕೆಎಯುಪಿಯ ಡಾ.ಎಂ.ಡಿ.ರಫಿ ಹಕೀಂ ಹಾಗೂ ಕೆಎಸ್‌ಬಿ ನೀಮಾ ಅಧ್ಯಕ್ಷರು ಮಾತನಾಡಲಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.

ಮಧ್ಯಾಹ್ನ 3.30 ಗಂಟೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸ್ತಿçà ರೋಗ ತಜ್ಞೆ ಡಾ.ಜಯಲಕ್ಷಿö್ಮ ಪಾಟ್ಕರ್, ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್, ಕೆವಿಜಿ ಪ್ರಾಂಶುಪಾಲ ಡಾ.ಡಿ.ವಿ. ಲೀಲಾಧರ್ ಹಾಗೂ ಕೊಡಗು ಡಿಎಒ ಡಾ.ಎಂ.ಶೈಲಜಾ ಪಾಲ್ಗೊಳ್ಳಲಿದ್ದಾರೆ.

ಸಂಜೆ 4.30 ಗಂಟೆಯಿAದ 5 ಗಂಟೆಯ ವರೆಗೆ ವೈದ್ಯಕೀಯ ನಿರ್ಲಕ್ಷ÷್ಯ ಮತ್ತು ವೈದ್ಯರ ಅರಿವು ವಿಷಯದ ಕುರಿತು ಕೊಡಗು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶÀ ಸಿ.ಕೆ. ಬಸವರಾಜ್ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶುಭ ಮಾತನಾಡಲಿದ್ದಾರೆ.

ನಂತರ ನೀಮಾ ಕೊಡಗು ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಆಯುರ್ವೇದ ಆರೋಗ್ಯ ಶಿಬಿರ ಬೆಳಗ್ಗೆ 10 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಆಯುರ್ವೇದಿಕ್ ಪೋಸ್ಟರ್ಸ್, ಸ್ಟಾಲ್ಸ್ ಮತ್ತು ಔಷಧೀಯ ಸಸ್ಯಗಳ ಪ್ರದರ್ಶನ ಕೂಡ ಇರಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net