ಸರ್ಕಾರ ಪಾಪರ್ ಆಗಿದೆ ಎಂಬುದಕ್ಕೆ ನೀರುಗಂಟಿ ಆತ್ಮಹತ್ಯೆ ಸಾಕ್ಷಿ

ex minister k.s.eshwarappa
Published on

ಶಿವಮೊಗ್ಗ: ರಾಜ್ಯ ಸರ್ಕಾರ ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಪಾಪರ್ ಆಗಿದೆ ಎಂಬುದಕ್ಕೆ ಚಾಮರಾಜನಗರದಲ್ಲಿ ನೀರುಗಂಟಿ ಆತ್ಮಹತ್ಯೆ ಮಾಡಿಕೊಂಡಿರುವುದೇ ಸಾಕ್ಷಿ. ಎರಡು ವರ್ಷಗಳಿಂದ ನೀರುಗಂಟಿಗಳಿಗೆ ವೇತನ ಪಾವತಿಸದಷ್ಟು ಸರ್ಕಾರ ಬಡವಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ದೂರಿದರು.

ಆಡಳಿತ ಯಂತ್ರ ಕುಸಿದಿದ್ದು, ರಸ್ತೆ ಸೇರಿ ಮೂಲಸೌಕರ್ಯ ಕಲ್ಪಿಸಲು ಸರ್ಕಾರದಿಂದ ಆಗುತ್ತಿಲ್ಲ. ಖಾಸಗಿ ವ್ಯಕ್ತಿಗಳು ಸ್ವಂತ ಖರ್ಚಿನಲ್ಲಿ ರಸ್ತೆ ಮಾಡಿಕೊಡುವುದಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಗುತ್ತಿಗೆದಾರರಿಂದ ಕಮೀಷನ್ ಶೇ.40ರಿಂದ 80ಕ್ಕೆ ಏರಿಕೆಯಾಗಿದೆ. 33 ಸಾವಿರ ಕೋಟಿ ರೂ. ಬಾಕಿ ಬಿಡುಗಡೆ ಆಗಬೇಕಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ, ಕೋರ್ಟ್‌ಗೆ ಹೋಗುವಂತೆ ಸಲಹೆ ನೀಡಿದ್ದಾರೆ. ಇದರಿಂದ ಅವರಿಗೆ ನಾಚಿಕೆಯಾಗಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net