ದ.ಕ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ಆರಂಭ

mng-july17-neet exam2
Published on

ಮಂಗಳೂರು: ವೈದ್ಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-2022 (ನೀಟ್-ಯುಜಿ) ಭಾನುವಾರ (ಜು.17) ಮಧ್ಯಾಹ್ನ 2ರಿಂದ ದ.ಕ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ಬಹುತೇಕ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಕೊಂಡಿದ್ದು, ಪರೀಕ್ಷೆ ಬರೆದಿದ್ದಾರೆ. ಬೆಳಗ್ಗೆ 10 ಗಂಟೆಯಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಆಗಮಿಸಿದ್ದು, ಹಲವು ಸುತ್ತಿನ ತಪಾಸಣೆ ಬಳಿಕ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net