ನೀಟ್ ಪರೀಕ್ಷಾ ಅಕ್ರಮ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

siddaramaiah
Published on

ಮೈಸೂರು: ಅಕ್ರಮ ಆರೋಪ ಹಿನ್ನೆಲೆಯಲ್ಲಿ ನೀಟ್ ರದ್ದುಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.


ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್)-2024ರಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿ ಬಂದಿದೆ. ಹೀಗಾಗಿ, ಈಗಾಗಲೇ ನಡೆದಿರುವ ನೀಟ್ ರದ್ದು ಮಾಡಬೇಕು ಎಂದು ಆಗ್ರಹಿಸಿದರು.


ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ) ನಡೆಸಿರುವ ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಆ ಬಗ್ಗೆ ತನಿಖೆ ಕೈಗೊಳ್ಳಬೇಕು. ಮರು ಪರೀಕ್ಷೆ ಮಾಡಬೇಕು ಎಂದು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ನೀಟ್ ಸರಿಯಾಗಿ ನಡೆಸಿಲ್ಲ.

ಕೃಪಾಂಕ ಕೊಟ್ಟು ಯಾರನ್ನೂ ಪಾಸ್ ಮಾಡಬಾರದು. ಹಾಗೆ ಮಾಡುವುದು ಕೆಟ್ಟ ಅಭ್ಯಾಸ. ಅಭ್ಯಾಸ ಮಾಡಿ ಪರೀಕ್ಷೆ ಬರೆದವರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net