ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ-ಜನಹಿತ ನಿರ್ಲಕ್ಷೃ

KAGERI
Published on

ಸಿದ್ದಾಪುರ: ರಾಜ್ಯದ ಕಾಂಗ್ರೆಸ್ ಸರ್ಕಾರದ ಕುರಿತು ಜನತೆಯಲ್ಲಿ ಭ್ರಮನಿರಸನ ಕಂಡುಬರುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟು ಅಭಿವೃದ್ಧಿ, ಜನಹಿತ ಕಾರ್ಯಗಳನ್ನು ನಿರ್ಲಕ್ಷಿಸಿದೆ. ಪ್ರತಿ ಹಂತದಲ್ಲೂ ಆಡಳಿತ ವೈಫಲ್ಯ, ಗೊಂದಲ ಎದ್ದು ಕಾಣುತ್ತಿದೆ ಎಂದು ಮಾಜಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಾಪುರ ತಾಲೂಕಿನಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಪಟ್ಟಣಕ್ಕೆ ಕುಡಿಯುವ ನೀರು, ಬಸ್ ಡಿಪೋ, ಸ್ವಾತಂತ್ರ್ಯ ಯೋಧರ ಉದ್ಯಾನವನ ಮುಂತಾದ ಕಾಮಗಾರಿಗಳಿಗೆ ಮಂಜೂರಾತಿ ಸಿಗಬೇಕಿದೆ. ತಾಲೂಕಿನಲ್ಲಿ ಅಧಿಕಾರಿಗಳು ಮುಕ್ತವಾಗಿ ಆಡಳಿತ ನಡೆಸುವ ಸ್ಥಿತಿ ಇಲ್ಲ. ಭಯದ ವಾತಾವರಣದಲ್ಲಿ ಕೆಲಸ ಮಾಡಬೇಕಿದೆ. ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಅಧಿಕಾರಿಗಳು ಜವಾಬ್ದಾರಿಯಿಂದ ಮುಕ್ತವಾಗಿ ಕೆಲಸ ಮಾಡುವ ವಾತಾವರಣ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಪ್ರತಿಪಕ್ಷವಾಗಿ ಜನರ ಧ್ವನಿಯಾಗಿ ನಮ್ಮ ಕೆಲಸ ಮಾಡುತ್ತಿದ್ದೇವೆ. ಜನರ ನಿರೀಕ್ಷೆಯಂತೆ ಮುಂದಿನ ದಿನಗಳಲ್ಲಿ ಕಾರ್ಯಯೋಜನೆ ರೂಪಿಸುತ್ತೇವೆ. ಜನರ ತೀರ್ಮಾನವನ್ನು ಸರ್ಕಾರ ಬದ್ಧತೆಯಿಂದ ನಿರ್ವಹಿಸಬೇಕು. ಚುನಾವಣೆಯಲ್ಲಿ ಅಭಿವೃದ್ಧಿ ಕಾರ್ಯ ಮಾನದಂಡವಾಗಬೇಕು ಎಂದರು.

ಲೋಕಸಭಾ ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡುತ್ತಿದ್ದೇವೆ. ವರಿಷ್ಠರು ತೆಗೆದುಕೊಂಡ ತೀರ್ಮಾನವನ್ನು ಪಾಲಿಸುತ್ತೇವೆ. ಅದು ನಮ್ಮ ಜವಾಬ್ದಾರಿ. ಪಕ್ಷದ ಒಳಿತಿಗಾಗಿ ಪಕ್ಷದ ಕೆಲಸ ನಾವೆಲ್ಲ ಮಾಡಬೇಕು. ಶಾಸಕ ಶಿವರಾಮ ಹೆಬ್ಬಾರ ಪಕ್ಷ ಬಿಟ್ಟು ಹೋಗುವುದಿಲ್ಲ. ನಮ್ಮ ಜತೆಗೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net