ಲಿಂಗಾಯತರ ಕಡೆಗಣನೆ ವಿಚಾರ, ಮೌನಕ್ಕೆ ಶರಣಾದ ಸಿದ್ದರಾಮಯ್ಯ

Siddaramaiah_at_the_function_Akshaya_Patra_Foundation_in_Karnataka
The President, Shri Pranab Mukherjee gracing the function to commemorate the serving of 2 billion meals of the Akshaya Patra Foundation, at Bangalore, in Karnataka on August 27, 2016. The Governor of Karnataka, Shri Vajubhai Rudabhai Vala, the Chief Minister of Karnataka, Shri Siddaramaiah and the Union Minister for Human Resource Development, Shri Prakash Javadekar are also seen.
Published on

ಮೈಸೂರು: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂದು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ನಗರದಲ್ಲಿ ಶನಿವಾರ ವೀರಶೈವ ಲಿಂಗಾಯತ ಅಧಿಕಾರಿಗಳ ಕಡೆಗಣನೆ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಲು ಆಸಕ್ತಿ ತೋರಲಿಲ್ಲ. ‘ನಾನು ಅದರ ಬಗ್ಗೆ ಮಾತನಾಡುವುದಿಲ್ಲ’ ಎಂದು ಹೇಳುವ ಮೂಲಕ ವಿವಾದದಿಂದ ದೂರ ಉಳಿಯುವ ಪ್ರಯತ್ನ ಮಾಡಿದರು.

ಬರ ಪರಿಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಮಸ್ಯೆಯೇನು ಇಲ್ಲ. 4,860 ಕೋಟಿ ರೂ. ಬರಪರಿಹಾರ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಿದ್ದೇವೆ. ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 30 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ನಷ್ಟವಾಗಿದೆ. ಆದರೆ, ಎನ್‌ಡಿಆರ್‌ಎಫ್ ನಿಯಮ ಪ್ರಕಾರ 4,860 ಕೋಟಿ ರೂ. ಪರಿಹಾರ ನೀಡುವಂತೆ ಕೋರಿದ್ದೇವೆ ಎಂದು ಹೇಳಿದರು.

ಕೇಂದ್ರ ಬರ ಅಧ್ಯಯನ ತಂಡ ಮೂರು ತಂಡಗಳಾಗಿ 11 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಅವರು ವರದಿ ನೀಡಿದ ಆಧಾರದ ಮೇಲೆ ಕೇಂದ್ರ ಸರ್ಕಾರ ಪರಿಹಾರ ನಿಗದಿ ಮಾಡಲಿದೆ. ಕೇಂದ್ರ ಬರ ಅಧ್ಯಯನ ತಂಡ ಸರಿಯಾಗಿ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲೆಡೆ ಭೇಟಿ ಮಾಡಿ ಜನರ ಅಹವಾಲು ಆಲಿಸಬೇಕು, ಜನಪ್ರತಿನಿಧಿಗಳ ಅಭಿಪ್ರಾಯ ಕೇಳಬೇಕು ಎಂದು ಕೇಂದ್ರ ಬರ ಅಧ್ಯಯನ ತಂಡಕ್ಕೆ ತಿಳಿಸಿದ್ದೇನೆ. ಆದರೆ, ಎಲ್ಲಿಗೆ ಭೇಟಿ ನೀಡಬೇಕು ಎಂಬುದನ್ನು ನಾವು ಸೂಚಿಸಲು ಸಾಧ್ಯವಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net