

ನಾಪೋಕ್ಲು: ಸಮೀಪದ ಹೊದ್ದೂರು ಗ್ರಾಮದ ಪೆಗ್ಗೋಳಿ ಸರ್ಕಾರಿ ಜಾಗದ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರು ಸೆಡ್ಡು ನಿರ್ಮಿಸಿ ನಡೆಸುತ್ತಿರುವ ಹೋರಾಟ 36 ದಿನ ಪೂರೈಸಿದೆ.
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿ ಮೊಣ್ಣಪ್ಪ ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆ ಸ್ಥಳಕ್ಕೆ ರಾಜ್ಯ ಸಮಿತಿ ಸದಸ್ಯ ಡಿ.ಎಸ್.ನಿರ್ವಾಣಪ್ಪ, ಮತ್ತು ಜಿಲ್ಲಾ ಕಾರ್ಯದರ್ಶಿ ವೈ.ಎಂ.ಸುರೇಶ, ಎಚ್.ಜೆ.ಪ್ರಕಾಶ್, ವೈ.ಎಂ. ಸುಬ್ರಮಣಿ ಶನಿವಾರ ಭೇಟಿ ನೀಡಿ ಮಾತನಾಡಿ, ನ್ಯಾಯ ದೊರಕಿಸಿಕೊಡಬೇಕಾದ ಅಧಿಕಾರಿಗಳು, ರಾಜಕೀಯ ನಾಯಕರು ಗಮನಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.