

ನವಲಗುಂದ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ದೂರಿದರು.
ನವಲಗುಂದ ಮಹದಾಯಿ ರೈತಪರ ಹೋರಾಟ ಸಮಿತಿ ವತಿಯಿಂದ ನವಲಗುಂದದಲ್ಲಿ ಗುರುವಾರ ಏರ್ಪಡಿಸಿದ್ದ ರೈತ ಬಂಡಾಯದಲ್ಲಿ ಹುತಾತ್ಮ ರೈತ ಬಸಪ್ಪ ಲಕ್ಕುಂಡಿ ಅವರ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದ್ದರೂ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆ ಜಾರಿಗೆ ಮನಸ್ಸು ಮಾಡುತ್ತಿಲ್ಲ ಎಂದು ಆರೋಪಿಸಿದರು. ಪುರಸಭೆ ಅಧ್ಯಕ್ಷ ಅಪ್ಪಣ್ಣ ಹಳ್ಳದ, ಹೋರಾಟಗಾರರಾದ ಡಿ.ಕೆ. ಹಳ್ಳದ, ಶಿವಣ್ಣ ಹುಬ್ಬಳ್ಳಿ, ಅಣ್ಣಿಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮಾಯಣ್ಣವರ, ಕಲ್ಲಪ್ಪ ಹುಬ್ಬಳ್ಳಿ, ಸಿದ್ದಲಿಂಗಪ್ಪ ಮದ್ನೂರ, ಭಗವಂತ ಪುಟ್ಟಣ್ಣವರ, ಶಂಕರಪ್ಪ ಗಾಣಿಗೇರ, ರಮೇಶ ನವಲಗುಂದ, ಪ್ರಕಾಶ ಕೊಣ್ಣೂರ, ಪ್ರದೀಪ ಲೆಂಕನಗೌಡ್ರ, ಮಲ್ಲಪ್ಪ ಕುರಹಟ್ಟಿ ಇತರರು ಇದ್ದರು.