

ಬಳ್ಳಾರಿ: ಕೋವಿಡ್-19 ಲಕ್ಷಣಗಳು ಹಾಗೂ ಅನಾರೋಗ್ಯಕ್ಕೀಡಾದರೆ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆ ಅಥವಾ ಫೀವರ್ ಕ್ಲೀನಿಕ್‌ಗೆ ಭೇಟಿ ನೀಡಿ, ಕರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ತಿಳಿಸಿದ್ದಾರೆ.
ಕಳೆದೊಂದು ವಾರದಿಂದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಈ ಅವಧಿಯಲ್ಲಿ 11 ಜನರು ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಮರಣ ಪ್ರಮಾಣ ಹೆಚ್ಚಲು ಜನರ ನಿರ್ಲಕ್ಷೃವೇ ಕಾರಣ ಎಂದು ಜಿಲ್ಲೆಯ ತಾಂತ್ರಿಕ ವೈದ್ಯಕೀಯ ತಜ್ಞರ ಸಮಿತಿ ತಿಳಿಸಿದೆ. ಪ್ರಮುಖವಾಗಿ ರೋಗದ ಲಕ್ಷಣ ಕಂಡು ಬಂದರೂ ಜನರು ನಿರ್ಲಕ್ಷಿಸಿ ತಡವಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದು. ಇಲ್ಲವೆ ಅಧಿಕೃತ ವೈದ್ಯರಲ್ಲದವರಿಂದ ಚಿಕಿತ್ಸೆ ಪಡೆಯುತ್ತಿರುವುದು.
ಜ್ವರ, ಕೆಮ್ಮು, ನೆಗಡಿ ಅಥವಾ ಯಾವುದೇ ಅನಾರೋಗ್ಯದ ಲಕ್ಷಣಗಳು ಕಂಡು ಬಂದ ತಕ್ಷಣ ಔಷದ ಅಂಗಡಿಗಳಿಂದ ಔಷಧ ಪಡೆಯುವುದು. ಜಿಲ್ಲಾಡಳಿತದಿಂದ ಕೋವಿಡ್ 19 ಲಕ್ಷಣದ ಬಗ್ಗೆ ಸಾರ್ವಜನಿಕರಿಗೆ ತಿಳಿಸಿದರೂ ಜನರು ನಿರ್ಲಕ್ಷಿಸುತ್ತಿದ್ದಾರೆ. ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳು ಕಂಡು ಬಂದ ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವುದರ ಜತೆಗೆ ಪಾಸಿಟಿವ್ ಬಂದರೆ ವೈದ್ಯರ ಮಾರ್ಗದರ್ಶನದಂತೆ ಹೋಮ್ ಕ್ವಾರೆಂಟೈನ್‌ನಲ್ಲಿರಬೇಕು. ಇದರಿಂದ ಕೋವಿಡ್ ಸೋಂಕಿನಿಂದ ಹೆಚ್ಚುತ್ತಿರುವ ಸಾವಿನ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.