

ರಾಯಚೂರು: ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಮಾಜಿ ಸಂಸದ ಬಿ.ವಿ.ನಾಯಕ ಸೇರಿದಂತೆ ಇತರರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದ್ದು, ಉತ್ತಮ ರೀತಿಯಲ್ಲಿ ಸ್ಪಂದನೆ ನೀಡಿದ್ದಾರೆ ಎಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ತಿಳಿಸಿದರು.
ಸ್ಥಳೀಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ, ಜೆಡಿಎಸ್ ಸಮನ್ವಯ ಸಭೆ ನಂತರ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಬಿ.ವಿ.ನಾಯಕ ಪಕ್ಷದ ನಾಯಕರು ಟಿಕೆಟ್ ನೀಡುವುದಾಗಿ ಹೇಳಿದ್ದರಿಂದ ಆಕಾಂಕ್ಷಿ ಎಂದು ಮುಂದೆ ಬಂದಿದ್ದೆ. ಟಿಕೆಟ್ ನೀಡದ್ದರಿಂದ ಅಸಮಾಧಾನವಾಗಿದೆ ಎಂದು ಹೇಳಿದ್ದಾರೆ ಎಂದರು.
ಪಕ್ಷದ ಇತರ ನಾಯಕರನ್ನು ಭೇಟಿಯಾಗಿ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಆಹ್ವಾನಿಸಲಾಗಿದೆ. ಶಾಸಕ ಮಾನಪ್ಪ ವಜ್ಜಲ್ ತಮ್ಮನಿಗೆ ಆರೋಗ್ಯ ಸಮಸ್ಯೆ ಕಾರಣಕ್ಕೆ ಹಾಗೂ ಮಾಜಿ ಶಾಸಕ ಕೆ.ಶಿವನಗೌಡ ನಾಯಕ ವೈಯಕ್ತಿಕ ಕೆಲಸದ ನಿಮಿತ್ತ ಸಭೆಗೆ ಬಂದಿಲ್ಲ. ಶೀಘ್ರದಲ್ಲಿ ಅವರು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲೆಯಲ್ಲಿ ಸಾಕಷ್ಟು ಅಕಾರಿಗಳು ಜಿಲ್ಲಾಕಾರಿಯಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಿ.ಕುಮಾರನಾಯಕ ಕೂಡಾ ಜಿಲ್ಲೆಯಲ್ಲಿ ಕೆಲಸ ಮಾಡಿದ್ದಾರೆ. ಅವರು ಸ್ಥಳೀಯರಲ್ಲ ವಲಸೆ ಹಕ್ಕಿ ಇದ್ದಂತೆ. ನಾನು ಜಿಲ್ಲೆಯಲ್ಲಿಯೇ ಇರುವಂತಹ ವ್ಯಕ್ತಿ.
ಕಾಂಗ್ರೆಸ್‌ನ ಗ್ಯಾರಂಟಿಗಳು ತಾತ್ಕಾಲಿಕ. ಮದ್ಯ, ನೋಂದಣಿ ಶುಲ್ಕ ಹೆಚ್ಚಳ ಮಾಡಿ ಆ ಹಣದಿಂದ ಗ್ಯಾರಂಟಿ ನೀಡುತ್ತಿದ್ದಾರೆ. ಶಾಶ್ವತವಾದ ಕಾರ್ಯಗಳು ಕಾಂಗ್ರೆಸ್‌ನಿಂದ ಸಾಧ್ಯವಿಲ್ಲ. ಕಳೆದ ಚುನಾವಣೆಯಲ್ಲಿ 1.18 ಲಕ್ಷ ಮತಗಳ ಅಂತರದಿಂದ ಗೆಲುವು ಸಾಸಿದ್ದೆ. ಈ ಬಾರಿ ಜೆಡಿಎಸ್ ಮೈತ್ರಿಯಿಂದಾಗಿ ಅದಕ್ಕಿಂತ ಹೆಚ್ಚಿನ ಮತಗಳಿಂದ ಗೆಲುವು ಸಾಸುತ್ತೇನೆ ಎಂದು ರಾಜಾ ಅಮರೇಶ್ವರ ನಾಯಕ ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಕ್ಷೇತ್ರದ ಉಸ್ತುವಾರಿ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಗಂಗಾಧರ ನಾಯಕ ಇದ್ದರು.