ನೇಹಾ, ಅಂಜಲಿಗೆ ಮನೆಗೆ ಡಾ.ಜಿ. ಪರಮೇಶ್ವರ ಭೇಟಿ

h20-Parameshwar Anjali House 1
Published on

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ತಿಂಗಳಲ್ಲಿಯೇ ಎರಡು ಹತ್ಯೆ ಪ್ರಕರಣಗಳು ನಡೆದು ಸಾರ್ವಜನಿಕರು ಭೀತಿಗೊಂಡಿದ್ದರು. ರಾಜಕೀಯ ನಾಯಕರು, ಸ್ವಾಮೀಜಿಗಳು ಹಾಗೂ ಸಾರ್ವಜನಿಕರು, ರಾಜ್ಯ ಸರ್ಕಾರದ ಮೇಲೆ ವಾಗ್ದಾಳಿ ನಡೆಸುತ್ತಿದ್ದಂತೆಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಸೋಮವಾರ ಹುಬ್ಬಳ್ಳಿಗೆ ಆಗಮಿಸಿದರು.
ಹತ್ಯೆಯಾದ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಅವರ ಮನೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಸೋಮವಾರ ಭೇಟಿ ನೀಡಿ ಅಂಜಲಿ ಅಜ್ಜಿ ಗಂಗಮ್ಮ, ಸಹೋದರಿ ಪೂಜಾ ಅವರೊಂದಿಗೆ ಸಮಾಲೋಚನೆ ನಡೆಸಿದರು.
ನೇಹಾ ಹಿರೇಮಠ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ ಹಿರೇಮಠ ಹಾಗೂ ತಾಯಿ ಗೀತಾ ಹಿರೇಮಠ ಅವರನ್ನು ಭೇಟಿ ಮಾಡಿದ ಗೃಹ ಸಚಿವರು, ವಸ್ತುಸ್ಥಿತಿ ಮಾಹಿತಿ ಪಡೆದರು. ನೇಹಾ ಪಾಲಕರು ಕೂಡ ಗೃಹ ಸಚಿವರೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ಒದಗಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net