

ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಫಯಾಜ್ನನ್ನು (23) ಬಂಧಿಸಿದ್ದಾರೆ.
ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಮಠಾಧೀಶರ ನೇತೃತ್ವದಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳು ಹುಬ್ಬಳ್ಳಿಯಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ಯಪಡಿಸಿದರು. ಆರೋಪಿಗೆ ತಕ್ಷಣ ಕಠಿಣ ಶಿಕ್ಷೆಯಾಗಬೇಕು, ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿನಿಯ ಬರ್ಬರ ಹತ್ಯೆ ದಿನದಿಂದ ದಿನಕ್ಕೆ ಕಾವು ಜೋರಾಗುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಾಳೆ ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ.
ಭಾನುವಾರ ಹುಬ್ಬಳ್ಳಿಗೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿವಿಧ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಮೃತ ವಿದ್ಯಾರ್ಥಿನಿ ನೇಹಾ ಹೀರೇಮಠ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ನಾಳೆ ಎರಡು ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದು, 2 ರಿಂದ 10 ಗಂಟೆವರೆಗೂ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್ನಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ಮಾಡಲಿದ್ದಾರೆ.