ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ​ ಆರೋಪಿಗೆ ಕೊಡುವ ಶಿಕ್ಷೆ ಜನರಲ್ಲಿ ಭಯ ಮೂಡಿಸಬೇಕು: ಆರೋಪಿ ಫಯಾಜ್​ ತಂದೆ

Fayaz Father
Published on

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ, ಬಿವಿಬಿ ಕಾಲೇಜು ಎಂಸಿಎ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಪಿ ಫಯಾಜ್​ ತಂದೆ ಬಾಬಾ ಸಾಹೇಬ್‌ ಸುಬಾನಿ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಆತನಿಗೆ ಕಠಿಣ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಬಾಬಾ ಸಾಹೇಬ್​ ಸುಬಾನಿ, ನನ್ನ ಮಗ ಮಾಡಿದ ತಪ್ಪಿಗೆ ರಾಜ್ಯದ ಜನರ ಬಳಿ ಕ್ಷಮೆ ಕೇಳುತ್ತೇನೆ. ದಯವಿಟ್ಟು ಯಾರೇ ಆಗಲಿ ನನ್ನ ಮಗನ ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಬೇಡಿ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ. ಆದರೆ ಈಗ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಆತನಿಗೆ ಕಠಿಣ ಶಿಕ್ಷೆಯಾಗಲಿ ಎಂದಿದ್ದಾರೆ.

ನನ್ನ ಮಗನನ್ನು ಭಾರತೀಯ ಸೇನೆಗೆ ಸೇರಿಬೇಕು ಎಂಬ ಆಸೆ ನನ್ನದಾಗಿತ್ತು. ಆದರೆ ಇಂದು ಆತ ಕ್ಷಮಿಸಲಾರದ ತಪ್ಪು ಮಾಡಿದ್ದಾನೆ. ಅವನಿಗೆ ಯಾವ ಶಿಕ್ಷೆ ಕೊಟ್ಟರೂ ಸ್ವೀಕರಿಸುತ್ತೇನೆ. ಮುಂದೆ ಯಾವ ಹೆಣ್ಣು ಮಕ್ಕಳ ಮೇಲೆ ಯಾರೂ ಕೈ ಮಾಡಬಾರದು. ಇವನಿಗೆ ಕೊಡುವ ಶಿಕ್ಷೆಯಿಂದ ಅಂತಹ ಭಯ ಜನರಲ್ಲಿ ಮೂಡಬೇಕು. ಆ ರೀತಿಯ ಶಿಕ್ಷೆಯನ್ನು ನೀಡಲಿ ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net