ನೇಹಾ ಹತ್ಯೆ ಪ್ರಕರಣ: ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು

20 ಎಸ್ಕೆಪಿ 4
ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹಿಂದುಪರ ಸಂಘಟನೆಗಳ ಪ್ರಮುಖರು ಶಿಕಾರಿಪುರದಲ್ಲಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಕುಮಾರಸ್ವಾಮಿ, ಆರ್.ಡಿ.ಸತೀಶ್, ಶಿವಕುಮಾರ್ ಇತರರಿದ್ದರು.
Published on

ಶಿಕಾರಿಪುರ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ಸೇರದಿಂತೆ ವಿವಿಧ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ತಾಲೂಕು ವಿಶ್ವ ಹಿಂದು ಪರಿಷತ್ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ರಾಜ್ಯದಲ್ಲಿ ದಿನೇ ದಿನೆ ಹಿಂದುಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ಸರ್ಕಾರ ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿದೆ. ತಕ್ಷಣ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಅಮಾಯಕ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ವಸಂತ್‌ಕುಮಾರ್, ಆರ್.ಡಿ.ಸತೀಶ್, ಶರತ್‌ಕುಮಾರ್, ಪ್ರದೀಪ್‌ಕುಮಾರ್, ಶಿವಕುಮಾರ್, ಎಸ್.ಬಿ.ಮಠದ್, ವಿಶ್ವನಾಥ್, ವಿಜಯ್‌ಕುಮಾರ್, ಚನ್ನವೀರಯ್ಯ, ಶಿವಯ್ಯ ಶಾಸ್ತ್ರಿ, ಪ್ರಶಾಂತ್ ಸಳಂಕಿ, ಶಿವರಾಜ್, ಪರಶುರಾಮ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net