ಸಿಬಿಐಗೆ ಹಸ್ತಾಂತರಿಸಿ-ಬೊಮ್ಮಾಯಿ

BOMMAI
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ರಾಜ್ಯದಲ್ಲಿ ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್​ಗಳಾಗಿವೆ. ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ. ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಹನುಮ ಜಯಂತಿ ಹಿನ್ನೆಲೆಯಲ್ಲಿ ಮಂಗಳವಾರ ಹುಬ್ಬಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ನೇಹಾ ತಂದೆ ನಿರಂಜನ ಹಿರೇಮಠ ಅವರು ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ ಎಂದು ಆರೋಪಿಸಿದರು.

ಕೆ.ಪಿ. ನಂಜುಡಿ ರಾಜೀನಾಮೆಯಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅವರು ಮೊದಲು ಕಾಂಗ್ರೆಸ್ಸಿನಲ್ಲಿಯೇ ಇದ್ದರು. ಬಳಿಕ ಬಿಜೆಪಿಗೆ ಬಂದಿದ್ದರು. ಈಗ ಮರಳಿ ಕಾಂಗ್ರೆಸ್​ಗೆ ಹೋಗುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net