

ರಾಣೆಬೆನ್ನೂರ: ಬಾಂಡೆ ಸಾಮಾನು ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಇಲ್ಲಿಯ ನೆಹರು ಮಾರುಕಟ್ಟೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ನಗರದ ಚಂದ್ರಶೇಖರ ಕ್ಷೀರಸಾಗರ ಎಂಬುವರಿಗೆ ಸೇರಿದ ಅಂಗಡಿಗೆ ಬೆಂಕಿ ಹತ್ತಿಕೊಂಡಿರುವುದು.
ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಇದರಿಂದಾಗಿ ಅಂಗಡಿಯಲ್ಲಿದ್ದ ಬಾಂಡೆ ಸಾಮಾನುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.