ಶ್ರಮಿಕ ವರ್ಗದ ಏಳಿಗೆಯಿಂದ ದೇಶದ ಅಭಿವೃದ್ಧಿ ಸಾಧ್ಯ

nelamangala 10th aaniversary
Published on

ದ್ವಿಚಕ್ರ ವಾಹನ ದುರಸ್ತಿದಾರರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವದಲ್ಲಿ ಶಾಸಕ ಶ್ರೀನಿವಾಸ್ ಅಭಿಮತ


ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಶ್ರದ್ಧೆ ಮತ್ತು ನಿಷ್ಠೆಯಿಂದ ಕೆಲಸ ಮಾಡಿದರೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ನಗರಸಭೆ ವ್ಯಾಪ್ತಿಯ ಕೆಂಪಲಿಂಗನಹಳ್ಳಿ ಗ್ರಾಮದ ಪ್ರಕಾಶ್ ಪಾರಂ ಹೌಸ್‌ನಲ್ಲಿ ಭಾವುವಾರ ದ್ವಿಚಕ್ರ ವಾಹನ ದುರಸ್ಥಿದಾರರ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ 10ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶ್ರಮಿಕ ವರ್ಗ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ. ವಾಹನ ದುರಸ್ತಿದಾರರು ಸರ್ಕಾರದಿಂದ ದೊರೆಯುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಜತೆಗೆ ದುಶ್ಚಟಗಳಿಂದ ದೂರವಿರಬೇಕು ಎಂದು ತಿಳಿಸಿದರು.
ಪುರಸಭೆ ಮಾಜಿ ಅಧ್ಯಕ್ಷ ಎ.ಪಿಳ್ಳಪ್ಪ ಮಾತನಾಡಿ, ದೇಶದ ಅಭಿವೃದ್ಧಿಗೆ ಶ್ರಮಿಕ ವರ್ಗಗಳ ಕೊಡುಗೆ ಅಪಾರವಾಗಿದೆ. ತಾಲೂಕಿನಾದ್ಯಂತ ಸಾಕಷ್ಟು ಮಂದಿ ದ್ವಿಚಕ್ರವಾಹನ ದುರಸ್ತಿ ಮಾಡಿ ಜೀವನ ನಡೆಸುತ್ತಿದ್ದು, ಕೆಲಸದ ಜತೆಗೆ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದರು.
ಕಿಟ್ ವಿತರಣೆ: ತಾಲೂಕಿನಾದ್ಯಂತ ಅಂದಾಜು 100ಕ್ಕೂ ಹೆಚ್ಚು ಮಂದಿ ದ್ವಿಚಕ್ರವಾಹನ ದುರಸ್ತಿದಾರರಿಗೆ ಅತ್ಯಾಧುನಿಕವಾಗಿ ನವೀಕರಿಸಿದ ಒಬಿಡಿ ಟೂಲ್ ಕಿಟ್ ವಿತರಣೆ ಮಾಡಲಾಯಿತು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಆನಂದ್, ಸದಸ್ಯ ಸಿ.ಪ್ರದೀಪ್‌ಕುಮಾರ್, ಅಂಜನಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ನಾರಾಯಣ್‌ಗೌಡ, ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಎನ್.ಪಿ.ಹೇಮಂತ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ನಾಗರಾಜು, ಉಪಾಧ್ಯಕ್ಷ ಸಿ.ಎಂ.ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ನಾರಾಯಣ್‌ಗೌಡ, ಮುಖಂಡರಾದ ಮುನಿಯಪ್ಪ, ಕೆ.ಕೃಷ್ಣಪ್ಪ, ನರಸಿಂಹಮೂರ್ತಿ, ಮನುಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net