ಜನಪರವಾದ ಕೈ ಸರ್ಕಾರ

nelamangala-a-meeting-of-activists-and-leaders
nelamangala-a-meeting-of-activists-and-leaders
Published on

ನೆಲಮಂಗಲ್ಲಿ ಮಾಜಿ ಮುಖ್ಯಮಂತ್ರಿ ಡಾ.ವೀರಪ್ಪಮೊಯ್ಲಿ ಹೇಳಿಕೆ


ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಬಡವರು, ದೀನದಲಿತರು, ಕೂಲಿ ಕಾರ್ಮಿಕರು, ನಿರಾಶ್ರಿತರ ಪರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಶ್ರಮಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಡಾ.ವೀರಪ್ಪಮೊಯ್ಲಿ ತಿಳಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 4 ತಿಂಗಳು ಪೂರೈಸಿದ್ದು, ಚುನಾವಣೆ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿ ಅನುಷ್ಠಾನ ಗೊಳಿಸಿದೆ ಎಂದ ಅವರು, ಪಕ್ಷದ ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಜನರನ್ನು ಮನವೊಲಿಸಿದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದರು.
ಲೋಕಸಭಾ ಕ್ಷೇತ್ರ ವ್ಯಾಪ್ತಿ ಸುಮಾರು 8 ವಿಧಾನಸಭಾ ಕ್ಷೇತ್ರದಲ್ಲಿ 6 ವಿಧಾನಸಭಾದಲ್ಲಿ ಕಾಂಗ್ರೆಸ್ ಶಾಸಕರಿದ್ದು, ಮುಂಬರುವ ಚುನಾವಣೆಗೂ ಪಕ್ಷದ ಕಾರ್ಯಕರ್ತರು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ಪಕ್ಷ ಗೆಲ್ಲಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಜನಪರ ಕಾರ್ಯಕ್ರಮಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದರು.
ಈ ಭಾಗದಲ್ಲಿ ಎತ್ತಿನಹೊಳೆ, ಋಷಭಾವತಿ ಜಲ ಯೋಜನೆಯನ್ನು ಜಾರಿಗೊಳಿಸಲು ಬಿಜೆಪಿ ಸರ್ಕಾರ ಸ್ಪಂದಿಸಿಲ್ಲ. ಆದರೆ, ಈ ಬಾರಿ ಕಾಂಗ್ರೆಸ್ ಸರ್ಕಾರ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸಿ ಕೆರೆಗೆ ಕುಡಿಯುವ ನೀರಿ ಪೂರೈಕೆ ಮಾಡಲು ಸಿದ್ಧವಾಗಿದೆ ಎಂದರು.
ಈ ಹಿಂದೆ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ವಿಮಾನ ನಿಲ್ದಾಣ ಮಾಡಲು ಮಂಜೂರು ಮಾಡಿತ್ತು. ಆಗ, ದೇವನಹಳ್ಳಿಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಬದಲು ಬಿಡದಿಯಲ್ಲಿ ಮಾಡಬೇಕೆಂದು ಮಣ್ಣಿನ ಮಕ್ಕಳು ತಡೆ ನೀಡಿದ್ದರು. ಈ ಬಾರಿಯು ಬಿಜೆಪಿಯವರು ಮಣ್ಣಿನ ಮಕ್ಕಳ ಸಹವಾಸ ಮಾಡಿದ್ದು, ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದರು.
ರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಇಂಡಿಯಾ ಎಂಬ ಕಲ್ಪನೆಯಲ್ಲಿ 28ರಾಷ್ಟ್ರೀಯ ಪಕ್ಷಗಳು ಒಂದಾಗಿವೆ. ಅದನ್ನು ಸಹಿಸಿಕೊಳ್ಳಲಾಗದೆ ಪ್ರಧಾನಿ ನರೇಂದ್ರ ಮೋದಿ ಅವರು ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ. ಎಂದು ಎಂದು ತಿಳಿಸಿದರು.
ಶಾಸಕ ಎನ್.ಶ್ರೀನಿವಾಸಯ್ಯ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದ ವೇಳೆ ವೀರಪ್ಪ ಮೊಯ್ಲಿ ಕಾರ್ಯಕರ್ತರಿಗೆ ಧೈರ್ಯ ತುಂಬವ ಮೂಲಕ ಪಕ್ಷ ಸಂಘಟಿಸಿದ್ದರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net