ಶೈಕ್ಷಣಿಕ ಸಾಧನೆಗೆ ವಿದ್ಯಾರ್ಥಿಗಳಲ್ಲಿ ಛಲ ಬೇಕು

nelamgala doctors day
Published on

*ಪ್ರವಾಡ ಶ್ರೀ ಬಸವಣ್ಣ ದೇವರ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯ

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಓದುವ ಮೂಲಕ ಉತ್ತಮ ಅಂಕಗಳಿಸಬೇಕು ಎಂಬ ಛಲ ಇರುವ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಅತಿಹೆಚ್ಚು ಸಾಧನೆ ಮಾಡಬಹುದು ಎಂದು ಪ್ರವಾಡ ಶ್ರೀ ಬಸವಣ್ಣ ದೇವರ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.
ನಗರದ ಪ್ರವಾಡ ಶ್ರೀ ಬಸವಣ್ಣ ದೇವರ ಮಠದ ಶ್ರೀ ಬಸವೇಶ್ವರ ಆಂಗ್ಲ ಪ್ರೌಢ ಶಾಲೆಯಲ್ಲಿ ಶ್ರೀ ಬಸವೇಶ್ವರ ಸಮೂಹ ಶಿಕ್ಷಣ ಸಂಸ್ಥೆಯಿಂದ ವೈದ್ಯರ ದಿನಾಚರಣೆ, ಸ್ನೇಹಿತರ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಾವುದೇ ಕಾರ್ಯ ಮಾಡಲು ಪ್ರತಿಯೊಬ್ಬರಿಗೂ ಶ್ರದ್ಧೆ ಎಂಬುದು ಮುಖ್ಯ. ವಿದ್ಯಾರ್ಥಿಗಳು ಪ್ರತಿಯೊಂದರಲ್ಲೂ ಶ್ರದ್ಧೆಯನ್ನು ಮೈಗ್ಗೂಡಿಸಿಕೊಂಡಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು.
ನಾಡಿನಲ್ಲಿ ವೈದ್ಯರಿಗೆ ಪೂಜನೀಯ ಸ್ಥಾನವಿದ್ದು, ಅವರನ್ನು ಗೌರವಿಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕಿದೆ. ಆನಾರೋಗ್ಯದಿಂದ ಸಾಕಷ್ಟು ಮಂದಿ ಬಳಲುತ್ತಿದ್ದು, ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಆರೋಗ್ಯವಂತ ವ್ಯಕ್ತಿಗಳು ಅತಿಹೆಚ್ಚು ನೀರನ್ನು ಕುಡಿಯುವುದನ್ನು ಅಭ್ಯಾಸ ಮಾಡಬೇಕಿದೆ. ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವನೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಜತೆಗೆ ಪರಿಸರ ಮಾಲಿನ್ಯದಿಂದ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದ್ದು, ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕಿದೆ ಎಂದರು. ರೋಟರಿ ಅಧ್ಯಕ್ಷ ಎಂ.ಟಿ.ನವೀನ್‌ಕುಮಾರ್ ಒಬ್ಬ ಉತ್ತಮ ಸ್ನೇಹಿತ ಒಂದು ಉತ್ತಮ ಪುಸ್ತಕವಿದಂತೆ, ಸ್ನೇಹಿತರನ್ನು ಆಯ್ಕೆ ಮಾಡುಕೊಳ್ಳುವ ವೇಳೆ ಅತ್ಯಂತ ಜಾಗೃತಿಯಿಂದ ಆಯ್ಕೆ ಮಾಡಿಕೊಳ್ಳಬೇಕು. ದುಶ್ಚಟ್ಟಗಳಿಂದ ದೂರವಿದ್ದು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ರೋಟರಿ ಸಂಸ್ಥೆ ತಾಲೂಕಿನಾದ್ಯಂತ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಆರೋಗ್ಯ, ಶಿಕ್ಷಣ, ಪರಿಸರಕ್ಕೆ ಹೆಚ್ಚಿನ ಅಧ್ಯತೆ ನೀಡುತ್ತಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲೇ ಪರಿಸರ ಸಂರಕ್ಷಣೆಯ ಗುಣವನ್ನು ಮೈಗ್ಗೂಡಿಸಿಕೊಳ್ಳಬೇಕು ಎಂದರು.
ವನಮಹೋತ್ಸವ ಪ್ರಯುಕ್ತ ಶ್ರೀ ಮಠದ ಅವರಣದಲ್ಲಿ ಸುಮಾರು 10ಕ್ಕೂ ಹೆಚ್ಚು ವಿವಿಧ ಬಗೆಯ ಸಸಿಗಳನ್ನು ನಡೆಲಾಯಿತು.
ರೋಟರಿ ಕಾರ್ಯದರ್ಶಿ ಶಿವರಾಮಯ್ಯ, ಜೆಪಿ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ.ಪ್ರಕಾಶ್, ಶ್ರೀ ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಮಹಮ್ಮದ್ ತನ್ವೀರ್ ಅಹಮದ್, ಶಾಲಾ ಮುಖ್ಯಶಿಕ್ಷಕ ಜಿ.ಎನ್.ಕೆಂಪಣ್ಣ, ಶಿಕ್ಷಕ ಪ್ರದೀಪ್, ಸುಲೋಚನಾ, ಉಷಾ, ಆಸ್ಮತ್ ಉನ್ನೀಸಾ, ಶೃತಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net