

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಸರ್ಕಾರಿ ಶಾಲೆಗಳು ಅಭಿವೃದ್ಧಿಯೊಂದರೆ ಮಾತ್ರ ದೇಶದ ಸಮಗ್ರ ಅಭ್ಯುದಯ ಸಾಧ್ಯ ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಎಂ.ಟಿ.ನವೀನ್‌ಕುಮಾರ್ ತಿಳಿಸಿದರು.
ತಾಲೂಕಿನ ಶ್ರೀನಿವಾಸಪುರದ ಸರ್ಕಾರಿ ಶಾಲೆಯಲ್ಲಿ ರೋಟರಿ ಸಂಸ್ಥೆಯಿಂದ ಶಾಲೆ ಬಣ್ಣ ಬಳಿಯುವ ಹಾಗೂ ಗೋಡೆ ಬರಹ ಮಾಡಿರುವುದನ್ನುಅನಾವರಣ ಮಾಡಿ, ಮಾತನಾಡಿದರು.
10 ವರ್ಷದಿಂದ ತಾಲೂಕಿನಲ್ಲಿ ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುವ ರೋಟರಿ, ಬಡವರು, ಕೂಲಿ ಕಾರ್ಮಿಕರ ಆರೋಗ್ಯ ದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರ ಹಾಗೂ ವಿಶೇಷವಾಗಿ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದರು.
ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಕಲಿಕಾ ಸಾಮಗ್ರಿ, ಮೂಲ ಸೌಕರ್ಯ ಹಾಗೂ ಶೈಕ್ಷಣಿಕ ಪ್ರಗತಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ಶಿಕ್ಷಣ ಪಡೆದುಕೊಳ್ಳಬೇಕು ಎಂದರು.
ಗ್ರಾಪಂ ಸದಸ್ಯ ಹನುಮಂತರಾಜು ಮಾತನಾಡಿ, ಅನೇಕ ವರ್ಷದಿಂದ ಸುಣ್ಣಬಣ್ಣ ಕಾಣದ ತಾಲೂಕಿನ ಶ್ರೀನಿವಾಸಪುರ ಸರ್ಕಾರಿ ಶಾಲೆಗೆ ರೋಟರಿ ಸಂಸ್ಥೆ ಬಣ್ಣ ಬಳಿದು, ಅಗತ್ಯಮೂಲ ೌಕರ್ಯ ಒದಗಿಸಿರುವುದು ಮಾದರಿ ಕಾರ್ಯ. ಮಕ್ಕಳ ಅನುಕೂಲಕ್ಕೆ ತಕ್ಕಂತೆ ಗೋಡೆಯ ಮೇಲೆ ಇತಿಹಾಸ ವಿಷಯ, ವರ್ಣಮಾಲೆ, ಚಿತ್ರಕಲೆ ಬಿಡಿಸಿದ್ದು, ವಿದ್ಯಾರ್ಥಿ ಸಾಕಷ್ಟು ವಿಚಾರ ತಿಳಿದಂತಾಗುತ್ತದೆ. ತಾಲೂಕಿನ ಬಹುತೇಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿತ್ತಿರುವ ರೋಟರಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.