ಪ್ರತಿ ಹಳ್ಳಿಯ ಅಭಿವೃದ್ಧಿಗೆ ಮೊದಲ ಆದ್ಯತೆ

nelavagilu gp election
Published on

ವಿಜಯವಾಣಿ ಸುದ್ದಿಜಾಲ ನಂದಗುಡಿ
ನಂದಗುಡಿ ಹೋಬಳಿಯ ನೆಲವಾಗಿಲು ಗ್ರಾಪಂ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ವಸಂತಾ ಲೋಕೇಶ್, ಉಪಾಧ್ಯಕ್ಷರಾಗಿ ರವಿ ಆಯ್ಕೆಯಾದರು.
ಗ್ರಾಪಂನಲ್ಲಿ ನಿಗದಿಯಾಗಿದ್ದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿದ್ದ ಅಧ್ಯಕ್ಷ ಸ್ಥಾನ ಹಾಗೂ ಹಿಂದುಳಿದ ವರ್ಗಕ್ಕೆ ಮೀಸಲಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಚುನಾವಣಾಧಿಕಾರಿ ಸಿ.ಎಲ್.ಸತೀಶ್ ಘೋಷಿಸಿದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ.ರಾಜಶೇಖರಗೌಡ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯಗಳಿಗೆ ಶ್ರಮಿಸಬೇಕು. ಗ್ರಾಪಂನಿಂದ ಜನರಿಗೆ ದೊರೆಯುವ ಮೂಲಸೌಲಭ್ಯ ಕಲ್ಪಿಸಿ, ಜನಪರ ಕಾಳಜಿ ವಹಿಸಿ, ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಮಾಡಬೇಕು ಎಂದರು.
ಅಧ್ಯಕ್ಷೆ ವಸಂತಾ ಲೋಕೇಶ್ ಮಾತನಾಡಿ, ಪಂಚಾಯಿತಿಯ ಪ್ರತಿ ಹಳ್ಳಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಕುಡಿಯುವ ನೀರು, ಚರಂಡಿ ವ್ಯವಸ್ಥೆಯನ್ನು ಆದ್ಯತೆ ಮೇರೆಗೆ ಕಲ್ಪಿಸಲಾಗುವುದು ಎಂದರು.
ಜಿಪಂ ಮಾಜಿ ಅಧ್ಯಕ್ಷೆ ಸವಿತಾ ಗೋಪಾಲ್, ತಾಪಂ ಮಾಜಿ ಸದಸ್ಯ ಬೀರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಧರ್ಮೇಶ್, ನೆಲವಾಗಿಲು ಎಸ್‌ಎಫ್‌ಸಿಎಸ್ ಅಧ್ಯಕ್ಷ ಎಸ್.ಮಂಜುನಾಥ್, ಮಾಜಿ ಅಧ್ಯಕ್ಷರಾದ ನಾರಾಯಣಗೌಡ, ಶ್ರೀನಿವಾಸ್, ಎಸ್‌ಬಿಟಿ ಬೈರೇಗೌಡ, ನಿರ್ದೇಶಕರಾದ ಎನ್.ಡಿ. ರಮೇಶ್, ಎ.ಆರ್.ಕೃಷ್ಣಪ್ಪ, ಪಿಡಿಒ ಮುನಿರಾಜು, ಗ್ರಾಪಂ ಮಾಜಿ ಅಧ್ಯಕ್ಷರಾದ ಪದ್ಮಾನಾಗೇಶ್, ವಿ.ರುಕ್ಮಿಣಿ ಮಂಜುನಾಥ್, ಮಾಜಿ ಉಪಾಧ್ಯಕ್ಷ ಸೊಣ್ಣೇಗೌಡ ಮಧುಸೂದನ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net