

ನೆಲ್ಯಾಡಿ: ವಿವಿ ಘಟಕ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ಬಿ.ನಾವೂರು ಮಾತನಾಡಿದರು. ಅನುಷ್ಠಾನ ಸಮಿತಿ ಅಧ್ಯಕ್ಷೆ ಉಷಾ ಅಂಚನ್, ನೆಲ್ಯಾಡಿ ಐಐಸಿಟಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಪ್ರಶಾಂತ್ ಸಿ.ಎಚ್. ಉಪಸ್ಥಿತರಿದ್ದರು.
ಕಾಲೇಜಿನ ಸಂಯೋಜಕ ಡಾ.ಸುರೇಶ್ ಅಧ್ಯಕ್ಷತೆ ವಹಿಸಿದರು. ವಿವಿ ಕಾಲೇಜಿಗೆ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾದ ಸುರೇಶ್ ಕುಮಾರ್ ಬಿ.ನಾವೂರು ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿ ಸಂಘದ ಸಂಚಾಲಕ ಡಾ.ನೂರಂದಪ್ಪ ವಿದ್ಯಾರ್ಥಿ ಸಂಘ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಸೀತಾರಾಮ ಪಿ. ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ವೆರೊಣಿಕ ಪ್ರಭಾ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಸಚಿನ್ ಎನ್.ಟಿ ಕಾರ್ಯಕ್ರಮ ನಿರ್ವಹಿಸಿದರು.
ಉದ್ಯಮಿ ರವಿಚಂದ್ರ ಹೊಸವಕ್ಲು, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಪ್ರೇಮಾ ಮತ್ತು ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.