

ಆರ್ಡಿ: ಗ್ರಾಮೀಣ ಭಾಗದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ನವಶಕ್ತಿ ಯುವಕ ಮಂಡಲ ಹಲವು ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಜನರ ಸೇವೆ ಮಾಡುತ್ತಿರುವುದು ಪ್ರಸಂಶನೀಯ. ಈ ನಿಟ್ಟಿನಲ್ಲಿ ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಸಹಭಾಗಿತ್ವ ನೀಡಿ ಸಹಕರಿಸುತ್ತಿದೆ ಎಂದು ಲಯನ್ಸ್ ಕ್ಲಬ್ ಆರ್ಡಿ, ಬೆಳ್ವೆ ಗೋಳಿಯಂಗಡಿ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ್ಗೋಳಿ ಹೇಳಿದರು.
ಅರಸಮ್ಮಕಾನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವಶಕ್ತಿ ಯುವಕ ಮಂಡಲ ಅರಸಮ್ಮಕಾನು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಹಮ್ಮಿಕೊಂಡ 13ನೇ ವರ್ಷದ ನೆತ್ತರ ನೆರವು ರಕ್ತದಾನ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
ಅರಸಮ್ಮನಕಾನು ನವಶಕ್ತಿ ಯುವಕ ಮಂಡಲ ಅಧ್ಯಕ್ಷ ಪ್ರಶಾಂತ ಹೆಗ್ಡೆ ಅಧ್ಯಕ್ಷತೆ ವಹಿಸಿದರು. ಮಡಾಮಕ್ಕಿ ಗ್ರಾಪಂ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಶೇಡಿಮನೆ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಕ್ತ ನಿಧಿ ಘಟಕ ಕುಂದಾಪುರ ಚೇರ್ಮನ್ ಎಸ್.ಜಯಕರ ಶೆಟ್ಟಿ, ಆರ್ಡಿ ಬೆಳ್ವೆ, ಗೋಳಿಯಂಗಡಿ ಲಯನ್ಸ್ ಕ್ಲಬ್ ಕೋಶಾಧಿಕಾರಿ ಬಿ.ಜಯಪ್ರಕಾಶ್ ಶೆಟ್ಟಿ ಯಳಂತೂರು, ಅರಸಮ್ಮಕಾನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯ ಶಿಕ್ಷಕ ಶ್ರೀಕಾಂತ್ ಆಚಾರ್ಯ, ನವಶಕ್ತಿ ಯುವಕ ಮಂಡಲ ಗೌರವಾಧ್ಯಕ್ಷ ಕೀರ್ತಿ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅರುಣ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಶಸ್ತಿ ಪುರಸ್ಕೃತ ನವಶಕ್ತಿ ಯುವಕ ಮಂಡಲ ಅರಸಮ್ಮಕಾನು, ಬೆಳ್ವೆ ವ್ಯವಸಾಯ ಸೇವಾ ಸಹಕಾರ ಸಂಘ ಬೆಳ್ವೆ, ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಯುವಶಕ್ತಿ ಆರ್ಡಿ ಬೆಳ್ವೆ-ಗೋಳಿಯಂಗಡಿ, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಉಡುಪಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಕ್ತನಿಧಿ ಕೇಂದ್ರ ಕುಂದಾಪುರ ಘಟಕ ಆಶ್ರಯದಲ್ಲಿ ದಿ.ಸುಧಾಕರ ಪೂಜಾರಿ ಅವರ ಸ್ಮರಣಾರ್ಥ 13ನೇ ವರ್ಷದ ರಕ್ತದಾನ ಶಿಬಿರ ನಡೆಯಿತು. ನವಶಕ್ತಿ ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವಾಧ್ಯಕ್ಷ ಕೀರ್ತಿ ಕುಮಾರ್ ಶೆಟ್ಟಿ ನಿರೂಪಿಸಿದರು