ಬಿಎಸ್‌ಎನ್‌ಎಲ್ ಟವರ್‌ಗೆ ಹೊಸ ಬ್ಯಾಟರಿ

mobile tower
Published on

ಸುಳ್ಯ: ಕೊನೆಗೂ ತೊಡಿಕಾನ ಬಿಎಸ್‌ಎನ್‌ಎಲ್ ಟವರ್‌ಗೆ ಹೊಸ ಬ್ಯಾಟರಿ ಅಳವಡಿಸಲಾಗಿದ್ದು ನೆಟ್ವರ್ಕ್ ಸಮಸ್ಯೆ ಸರಿಯಾಗುವ ಭರವಸೆ ದೊರಕಿದೆ.
ಕೆಲ ದಿನಗಳ ಹಿಂದೆ ಶಾಸಕಿ ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ಅರಂತೋಡು ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಅರಂತೋಡು ಪಂಚಾಯಿತಿ ಅಧ್ಯಕ್ಷ ಕೇಶವ ಅಡ್ತಲೆ ಮತ್ತಿತರರು ಮಂಗಳೂರಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಭೇಟಿಯಾಗಿ ಇಲ್ಲಿನ ಟವರ್‌ಗೆ ಹೊಸ ಬ್ಯಾಟರಿ ಅಳವಡಿಸುವಂತೆ ಮನವಿ ಸಲ್ಲಿಸಿದ್ದರು. ಸಂಸದರು ಹಾಗೂ ಶಾಸಕರು ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಹೊಸ ಬ್ಯಾಟರಿ ಒದಗಿಸುವಂತೆ ಕೇಳಿದ್ದರು.

ಸರಿಯಾಗಿ ಮೊಬೈಲ್ ನೆಟ್ವರ್ಕ್ ಸಿಗದ ಹಿನ್ನೆಲೆಯಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಗ್ರಾಮಸ್ಥರು ಟವರ್‌ಗೆ ಹೊಸ ಬ್ಯಾಟರಿ ಅಳವಡಿಸಲು ಒತ್ತಾಯಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net