ಪ್ರಾಯೋಗಿಕ ಪರೀಕ್ಷೆ ವೇಳೆ ನೂತನ ಬಾಯ್ಲರ್ ಸ್ಪೋಟ, ನಾಲ್ವರಿಗೆ ಗಾಯ

NANDI SHUGAR
Published on

ವಿಜಯಪುರ: ಪ್ರಾಯೋಗಿಕ ಪರೀಕ್ಷೆ ವೇಳೆ ನೂತನ ಬಾಯ್ಲರ್ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದೆ.

ಇತ್ತೀಚೆಗೆ ಕಾರ್ಖಾನೆಯಲ್ಲಿ ನೂತನವಾಗಿ ಬಾಯ್ಲರ್ ಸ್ಥಾಪನೆ ಮಾಡಲಾಗಿತ್ತು. 51 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ 220 ಟನ್ ಸಾಮರ್ಥ್ಯದ ಬಾಯ್ಲರ್‌ನ ಪರೀಕ್ಷೆ ನಡೆದಿತ್ತು. ಈ ವೇಳೆ ಏಕಾಏಕಿ ಸ್ಪೋಟಗೊಂಡಿದೆ. ಘಟನೆಯಿಂದ ಸ್ಥಳದಲ್ಲಿ ಕೆಲ ಕಾಲ ತೀವ್ರ ಆತಂಕ ಸೃಷ್ಠಿಯಾಯಿತು. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net