ಎರಡು ವರ್ಷದಲ್ಲಿ 241 ನವಜಾತ ಶಿಶುಗಳ ಮರಣ!!

Health Meeting
Published on

ಕಾರವಾರ: ನವಜಾತ ಶಿಶುಗಳ ಮರಣವನ್ನು ಶೂನ್ಯಕ್ಕಿಳಿಸುವ ನಿಟ್ಟಿನಲ್ಲಿ ಶಿಶುಗಳನ್ನು ಸುರಕ್ಷಿತವಾಗಿ ಆರೈಕೆ ಮಾಡುವ ಕುರಿತಂತೆ ಜಿಲ್ಲೆಯಾದ್ಯಂತ ವ್ಯಾಪಕ ರೀತಿಯಲ್ಲಿ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 2023-24 ರಲ್ಲಿ ವಿವಿಧ ಆರೋಗ್ಯ ಸಂಬAಧಿತ ಮತ್ತು ಇತರೆ ಕಾರಣಗಳಿಂದಾಗಿ 138 ನವಜಾತು ಶಿಶುಗಳ ಮರಣ ಹೊಂದಿದ್ದು, 2024-25 ರಲ್ಲಿ ಈ ಸಂಖ್ಯೆ 103 ಕ್ಕಿಳಿದಿದೆ ಆದರೂ ಸಹ ಈ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ನಿಟ್ಟಿನಲ್ಲಿ ಶಿಶುಗಳನ್ನು ಆರೈಕೆ ಮಾಡುವ ಕ್ರಮಗಳ ಕುರಿತಂತೆ ಎಲ್ಲಾ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಅವರು ಆಸ್ಪತ್ರೆಯಿಂದ ಮನೆಗೆ ಹೋಗುವ ಪೂರ್ವದಲ್ಲಿ ಆರೋಗ್ಯ ಕೇಂದ್ರದ ವೈದ್ಯರು ಸವಿವರವಾಗಿ ಜಾಗೃತಿ ಮೂಡಿಸಬೇಕು. ಅಲ್ಲದೇ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರ ಮನೆಗಳಿಗೆ ಭೇಟಿ ನೀಡಿ ಮಗುವಿನ ಆರೈಕೆ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಶಿಶುಗಳ ಆರೈಕೆ ಬಗ್ಗೆ ಪರಿಶೀಲಿಸಿ, ಹೆಚ್ಚಿನ ಆರೈಕೆಯ ಅಗತ್ಯ ಕಂಡು ಬಂದಲ್ಲಿ ಕೂಡಲೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ದಾಖಲು

ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ತಾಯಿಯರ ಮರಣ ತಪ್ಪಿಸುವ ನಿಟ್ಟಿನಲ್ಲಿ ತಾಯಿಯರ ಆರೋಗ್ಯದ ಕುರಿತಂತೆ ರೂಪಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಅವರಿಗೆ ನೀಡಲಾಗುವ ತಾಯಿ ಕಾರ್ಡ್ನಲ್ಲಿ ಆರೋಗ್ಯ ಸ್ಥಿತಿಗತಿಯ ಸಂಪೂರ್ಣ ವಿವರಗಳನ್ನು ದಾಖಲಿಸುವುದರ ಜೊತೆಗೆ ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸಿ ಅಗತ್ಯವಿರುವ ಔಷಧ ಮತ್ತು ಮಾತ್ರೆಗಳನ್ನು ವಿತರಿಸಬೇಕು ಮತ್ತು ಪ್ರತೀ ತಿಂಗಳು ಕಾರ್ಡ್ನ ಪರಿಶೀಲನೆ ಮಾಡಬೇಕು, ಮಕ್ಕಳು ಮತ್ತು ಗರ್ಭಿಣಿಯರ ಲಸಿಕೆ ವಿತರಣೆ ಕಾರ್ಯಕ್ರಮದಲ್ಲಿ ಶೇ.100 ಸಾಧನೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಬಾಡಿಗೆ ಕಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಕ್ಲಿನಿಕ್‌ಗಳಿಗೆ ಸ್ವಂತ ಕಟ್ಟಡ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ನಗರಸ್ಥಳೀಯ ಸಂಸ್ಥೆಯ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳಬೇಕು, ಅಂಧತ್ವ ನಿವಾರಣೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಣ್ಣಿನ ತಪಾಸಣಾ ಶಿಬಿರಗಳು ಮತ್ತು ಶಸ್ತç ಚಿಕಿತ್ಸೆಗಳನ್ನು ಕೈಗೊಳ್ಳಬೇಕು, ಕ್ಷಯರೋಗ ಪ್ರಕರಣಗಳ ಬಗ್ಗೆ ನಿಯಮಿತವಾಗಿ ತಪಾಸಣೆ ನಡೆಸಿ, ಅವರನ್ನು ಕ್ಷಯರೋಗ ಮುಕ್ತರನ್ನಾಗಿ ಮಾಡಬೇಕು, ಮಲೇರಿಯಾ, ಡೆಂಗಿ ಪ್ರಕರಣಗಳ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಮನೆ ಮನೆ ಭೇಟಿ ನೀಡಿ ಲಾವಾ ಸರ್ವೆ ಮತ್ತು ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಪಡಿಸಬೇಕು ಎಂದರು.

ಸರ್ಕಾರಿ ಕಚೇರಿಗಳಲ್ಲಿ ಯಾವುದೇ ರೀತಿಯ ತಂಬಾಕು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಅವುಗಳನ್ನು ತಂಬಾಕು ಮುಕ್ತ ಸ್ಥಳಗಳನ್ನಾಗಿ ಮಾಡಲು ಕ್ರಮ ಕೈಗೊಂಡು ತಂಬಾಕು ಮುಕ್ತ ಕಚೇರಿ ಎಂದು ಅಧಿಕೃತವಾಗಿ ಘೋಷಣೆ ಮಾಡಬೇಕು, ಜಿಲ್ಲೆಯ ಪ್ರತೀ 2 ತಾಲೂಕಿನ ಎರಡು ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಹಾವು ಕಡಿತ ಪ್ರಕರಣಗಳಿಗೆ ಸಂಬAಧಿಸಿದAತೆ ಔಷಧಿಗಳ ಕೊರತೆ ಇಲ್ಲವಾಗಿದ್ದು, ರೋಗಿಗಳಿಗೆ ತಕ್ಷಣ ತುರ್ತು ಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕು, ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿ, ದುರಂತ ಸಂಬAದಿಸಿದ್ದಲ್ಲಿ ಸಂಬಂಧಪಟ್ಟ ವೈದ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಸ್ತುತ ಸಂದರ್ಭದಲ್ಲಿ, ಯಾವುದೇ ಸಮಯದಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆ ಕಂಡು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು, ಆಂಬುಲೆನ್ಸ್ಗಳು ಮತ್ತು ವೈದ್ಯಕೀಯ ಉಪಕರಣಗಳು ಸುಸ್ಥಿತಿಯಲ್ಲಿರುವುವಂತೆ ಮತ್ತು ಯಾವುದೇ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ರಕ್ತದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು

ಜಿಲ್ಲಾಧಿಕಾರಿ ತಿಳಿಸಿದರು.

ಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ  ಕಲ್ಯಾಣಾಧಿಕಾರಿ ಡಾ.ನೀರಜ್, ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ. ಕ್ಯಾ. ರಮೇಶ್ವ್ ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮತ್ತು ತಾಲೂಕು ವೈದ್ಯಾಧಿಕಾರಿಗಳು ಇದ್ದರು.

ಗರ್ಭಿಣಿ ತಾಯಿ ಮತ್ತು ನವಜಾತು ಶಿಶುಗಳ ಆರೈಕೆ ಬಗ್ಗೆ ಗರ್ಭಿಣಿ ಮಹಿಳೆಯರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಪ್ರತೀ ವಾರ , ಸರ‍್ಷಕಿತ ಆರೋಗ್ಯದ ಕುರಿತು ಅವರು ಪಾಲಿಸಬೇಕಾದ ಪ್ರಮುಖ ಸಲಹೆಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ 0124-4451660 ಸಂಖ್ಯೆಯಿಂದ ಉಚಿತ ಮಾಹಿತಿ ಸಂದೇಶ ಬರಲಿದ್ದು, ಈ ಸಲಹೆಯನ್ನು ಮತ್ತೆ ಕೇಳಲು 14423 ಗೆ ಡಯಲ್ ಮಾಡಬಹುದಾಗಿದೆ. ಜಿಲ್ಲೆಯ ಎಲ್ಲಾ ಗರ್ಭಿಣಿ ಮಹಿಳೆಯರು ಮತ್ತು ನವಜಾತ ಶಿಶುವಿನ ತಾಯಿಯರು ಈ ಸೌಲಭ್ಯವನ್ನು ತಪ್ಪದೇ ಪಡೆದುಕೊಳ್ಳುವ ಮೂಲಕ ತಮ್ಮ ಮತ್ತು ಮಗುವಿನ ಸುರಕ್ಷಿತ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು:  ಕೆ.ಲಕ್ಷ್ಮೀಪ್ರಿಯಾ  ಜಿಲ್ಲಾಧಿಕಾರಿ, ಉತ್ತರ ಕನ್ನಡ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net