

ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ನೂತನ ಸಿಇಒ ಡಾ.ಎಸ್.ಆಕಾಶ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಜೆ.ಸೋಮಶೇಖರ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು,ಸೋಮಶೇಖರ್,ಆಕಾಶ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಎಬಿಎಸ್ ಪೂರೈಸಿರುವ ಇವರು,2019ನೇ ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿ ಕಲಬುರಗಿಯಲ್ಲಿ ಒಂದು ವರ್ಷ ಹತ್ತು ತಿಂಗಳ ಕಾಲ ಪ್ರೊಬೇಷನರಿ ಅಧಿಕಾರಿಯಾಗಿ ತರಬೇರಿ ಪಡೆದಿದ್ದಾರೆ. ಬಳಿಕ ಬಳ್ಳಾರಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ನಂತರದಲ್ಲಿ ಕೊಡಗು ಜಿಪಂ ಸಿಇಒ ಹಾಗೂ ಕಲಬುರಗಿ ವಿಭಾಗೀಯ ಶಿಕ್ಷಣ ಆಯು ಕ್ತರಾಗಿ ಕಾರ‌್ಯನಿರ್ವಹಿಸಿದ್ದಾರೆ.