ಹೊಸ ಕಾಲೇಜುಗಳ ಆರಂಭಕ್ಕೆ ಅರ್ಜಿ ಆಹ್ವಾನ

Application_new
Published on

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ 2023-24ನೇ ಸಾಲಿನಲ್ಲಿ ಹೊಸದಾಗಿ ಕಾಲೇಜುಗಳನ್ನು ಆರಂಭಿಸಲು ಅರ್ಹ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಡಿ.6ರ ವರೆಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ವೆಬ್​ಸೈಟ್ https://pue.karnataka.gov.in/english ನೋಡಬಹುದು. 2021-22 ಮತ್ತು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿಪೂರ್ವ ಕಾಲೇಜು ಆರಂಭಿಸಲು ಆನ್​ಲೈನ್​ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲವೆಂದು ಪಿಯು ಇಲಾಖೆ ಪ್ರಕಟಣೆ ತಿಳಿಸಿದೆ.

ಒಂದು ವೇಳೆ ತಮ್ಮ ಅರ್ಜಿಯು ಇಲಾಖೆಯಿಂದ ತಿರಸ್ಕೃತಗೊಂಡಿದ್ದಲ್ಲಿ, ಆಕ್ಷೇಪಣೆಗಳಿದ್ದಲ್ಲಿ, 2023-24ನೇ ಸಾಲಿನ ಸ್ಥಳ ಪರಿಶೀಲನೆ ಸಮಿತಿಯ ವರದಿಯೊಂದಿಗೆ ತ್ವರಿತವಾಗಿ ಪ್ರಸ್ತಾವನೆಯನ್ನು ಸಂಬಂಧಿಸಿದ ಎಲ್ಲ ಜಿಲ್ಲಾ ಉಪನಿರ್ದೇಶಕರ ಮೂಲಕ ಸಲ್ಲಿಸುವುದು ಕಡ್ಡಾಯಗೊಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net