ವಿದ್ಯುತ್ ಬಿಲ್ ನೀಡಲು ತೆರಳಿದ ಮನೆ ಮಾಲೀಕರು ನವ ದಂಪತಿಯ ಸ್ಥಿತಿ ಕಂಡು ಕಂಗಾಲಾಗಿದ್ದೇಕೆ?

Couple Suicide
Published on

ಬೆಂಗಳೂರು: ಶ್ರೀರಾಂಪುರದ ದಯಾನಂದ ರಸ್ತೆಯಲ್ಲಿ ನವ ವಿವಾಹಿತ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಹಾರ ಮೂಲದ ರಾಹುಲ್ (30) ಮತ್ತು ರಾಣಿ (26) ಮೃತ ದಂಪತಿ.

ದಯಾನಂದ ರಸ್ತೆಯಲ್ಲಿ ಬಾಡಿಗೆ ಮನೆ 2ನೇ ಮಹಡಿಯಲ್ಲಿ ನೆಲೆಸಿದ್ದರು. ಶುಕ್ರವಾರ ಸಂಜೆ ಮನೆ ಮಾಲೀಕರು ವಿದ್ಯುತ್ ಬಿಲ್ ನೀಡಲು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.

ಬಿಹಾರದಲ್ಲಿಯೇ ಮದುವೆ ಆಗಿದ್ದ ದಂಪತಿ 4 ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆಗೆ ಬಂದಿದ್ದರು. ಚಿಕ್ಕಪೇಟೆಯ ಬಟ್ಟೆ ಅಂಗಡಿಯಲ್ಲಿ ರಾಹುಲ್ ಕೆಲಸ ಮಾಡುತ್ತಿದ್ದ. ಎರಡು ತಿಂಗಳ ಬಾಡಿಗೆ ನೀಡಿದ್ದ. ಗುರುವಾರ ಬೆಳಗ್ಗೆ ಹೊರಬಂದಿದ್ದ ದಂಪತಿ ಕೋಳಿ ಮಾಂಸ ತೆಗೆದುಕೊಂಡು ಹೋಗಿದ್ದರು. ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಾಣಿ ಶವ ಪತ್ತೆಯಾಗಿದ್ದು, ರಾಹುಲ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net