ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿವಿಯಿಂದ ಹೊಸ ಕೋರ್ಸ್ ಪ್ರಾರಂಭ

Application_new
Published on

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ ಹೊಸ ಕೋರ್ಸ್‌ಗಳನ್ನು ಆರಂಭಿಸಲಾಗಿದೆ. ಈ ಭಾಗದಲ್ಲಿ ಐದು ಅಧ್ಯಯನ ಕೇಂದ್ರಗಳಿವೆ. ಹೀಗಾಗಿ ಉನ್ನತ ವಿದ್ಯಾಭ್ಯಾಸದಲ್ಲಿ ಆಸಕ್ತಿ ಇರುವವರು ಪ್ರಯೋಜನ ಪಡೆಯಬೇಕೆಂದು ವಿವಿಯ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ.ಎಸ್.ರಾಧಾ ಹೇಳಿದರು.

ಶೇಷಾದ್ರಿ ಅಯ್ಯರ್ ರಸ್ತೆಯ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜು, ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು, ಬೈಲಕುಪ್ಪೆಯ ಸೆರಾ ಜೆ. ಮೊನಾಸ್ಟ್ರಿ, ಜೆಎಸ್‌ಎಸ್ ಜನ ಶಿಕ್ಷಣ ಸಂಸ್ಥೆ, ಮೈಸೂರು ವೈದ್ಯಕೀಯ ಕಾಲೇಜುಗಳಲ್ಲಿ ವಿವಿಯ ಅಧ್ಯಯನ ಕೇಂದ್ರಗಳಿವೆ. ಇವುಗಳನ್ನು ವಿದ್ಯಾರ್ಥಿಗಳ ಕಲಿಕೆ ದೃಷ್ಟಿಯಲ್ಲಿಟ್ಟುಕೊಂಡು ಮಾನ್ಯತೆ ಪಡೆದ ಉನ್ನತ ಶಿಕ್ಷಣ ಕೇಂದ್ರಗಳನ್ನಾಗಿಸಲಾಗಿದೆ. ಪೂರ್ಣ ಪ್ರಮಾಣದ ಅಧ್ಯಾಪಕರು, ಸುಸಜ್ಜಿತ ಮೂಲ ಸೌಕರ್ಯ ಹೊಂದಿವೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉದ್ಯಮಶೀಲತೆ, ಸಂಸ್ಕೃತ, ಜ್ಯೋತಿಷ, ಉರ್ದು, ಡ್ರಾಯಿಂಗ್ ಆ್ಯಂಡ್ ಪೈಂಟಿಂಗ್, ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ, ಆಂತ್ರೊಪಾಲಜಿ ಮೊದಲಾದ ಹೊಸ ಕೋರ್ಸ್ ಆರಂಭಿಸಲಾಗಿದೆ. ವಿವಿಯಲ್ಲಿ ಅತಿ ಕಡಿಮೆ ಶುಲ್ಕ ಪಡೆಯುತ್ತಿದ್ದು, ರಾಷ್ಟ್ರ ಹಾಗೂ ವಿದೇಶಗಳಲ್ಲಿಯೂ ಇದರ ಪ್ರಮಾಣ ಪತ್ರಗಳಿಗೆ ಮಾನ್ಯತೆ ಇದೆ ಎಂದರು.

ಸಹಾಯಕ ಪ್ರಾದೇಶಿಕ ನಿರ್ದೇಶಕಿ ಡಾ.ಹೇಮಾಮಾಲಿನಿ, ಡಾ.ಶ್ರೀಹರ್ಷ, ಪ್ರೊ.ಸಿದ್ದರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net