ಕೊಡಗು ನೂತನ ಡಿಸಿಯಾಗಿ ವೆಂಕಟ್ ರಾಜಾ ಅಧಿಕಾರ ಸ್ವೀಕಾರ

21mdk03
Published on

ಮಡಿಕೇರಿ:

ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ಬುಧವಾರ ಅಧಿಕಾರ ವಹಿಸಿಕೊಂಡರು. ಕಳೆದ ಒಂದು ವರ್ಷ ಎಂಟು ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ.ಸಿ. ಸತೀಶ ಅವರಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಡಾ.ವೆಂಕಟ್ ರಾಜಾ ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ, ಕೊಪ್ಪಳ ಜಿಲ್ಲೆಯಲ್ಲಿ ಜಿ.ಪಂ.ಸಿಇಒ ಆಗಿ, ಬೀದರ್‌ನಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಜೊತೆಗೆ ಕೋವಿಡ್ ಸಂದರ್ಭದಲ್ಲಿ ನೋಡಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ವೆಂಕಟ್ ರಾಜಾ ಮಾಹಿತಿ ನೀಡಿದರು.

ಪಾರದರ್ಶಕ ಮತ್ತು ಜನಸ್ನೇಹಿಯಾಗಿ ಆಡಳಿತ ನೀಡಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಪಣ ತೊಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net