

ಮಂಡ್ಯ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೂತನ ಉಪನಿರ್ದೇಶಕ ಎಚ್.ಶಿವರಾಮೇಗೌಡ ಶುಕ್ರವಾರ ತಮ್ಮ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಡಿಡಿಪಿಐ ಆಗಿದ್ದ ಎಸ್.ಟಿ.ಜವರೇಗೌಡ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಎಚ್.ಶಿವರಾಮೇಗೌಡ ಅವರನ್ನು ಸರ್ಕಾರ ವರ್ಗಾಯಿಸಿ ಆದೇಶ ಹೊರಡಿಸಲಾಗಿತ್ತು. ಈ ಹಿನ್ನಲೆಯಲ್ಲಿ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಣದ ಗುಣಮಟ್ಟವನ್ನು ಉತ್ತಮ ಪಡಿಸಲು ಎಲ್ಲ ಅಧಿಕಾರಿಗಳು ಹಾಗೂ ಶಿಕ್ಷಕರ ಸಹಕಾರ ಪಡೆದು ಅಗತ್ಯವಾದ ಸಲಹೆ, ಸೂಚನೆಗಳನ್ನು ನೀಡುತ್ತಾ, ನಿಯಮಾನುಸಾರ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಶೈಕ್ಷಣಿಕ ಗುಣಮಟ್ಟವನ್ನು ಉತ್ತಮ ಪಡಿಸಲು ಸಂಕಲ್ಪ ಮಾಡಿದ್ದು, ಇದಕ್ಕಾಗಿ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಶಿಕ್ಷಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.