

ಜಮಖಂಡಿ: ಉಪವಿಭಾಗದ ಡಿವೈಎಸ್ಪಿ ಶಾಂತವೀರ ಈ. ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ನೂತನ ಡಿವೈಎಸ್ಪಿಯಾಗಿ ಸೈಯದ್ ರೋಷನ್ ಜಮೀರ್ ಎಸ್. ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವ ಜತೆಗೆ ಕಾನೂನು ಬಾಹಿರ ಚಟುವಟಿಕೆಗೆ ಕಡಿವಾಣ ಹಾಕುವುದಾಗಿ ತಿಳಿಸಿದರು.
ಡಿವೈಎಸ್ಪಿ ಶಾಂತವೀರ ಈ. ಅವರನ್ನು ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.