ಅಭಿವೃದ್ಧಿಗೆ ನೂತನ ಶಿಕ್ಷಣ ನೀತಿ ಪೂರಕ: ಶ್ರೀಸಿದ್ದಲಿಂಗ ಸ್ವಾಮೀಜಿ

22TMK_VV_NEP
Published on

ತುಮಕೂರು: ದೇಶದ ಅಭಿವೃದ್ಧಿಗೆ ಎಲ್ಲರೂ ಶಿಕ್ಷಣ ಪಡೆಯುವುದು ಅತ್ಯಗತ್ಯವಾಗಿದ್ದು ಪಡೆಯವ ಶಿಕ್ಷಣ ಗುಣಮಟ್ಟದಿಂದಿರಬೇಕು ಎಂಬ ಉದ್ದೇಶದಿಂದ ಭಾರತ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದೆ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.

ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಪಟ್ಟಂತೆ ವಿದ್ಯಾಭಾರತಿ, ಭಾರತೀಯ ಮಂಡಳ, ಎಬಿವಿಪಿ ಹಾಗೂ ಮಾಧ್ಯಮಿಕ ಶಿಕ್ಷಕ ಸಮಿತಿ ಆಯೋಜಿಸಿರುವ ಸ್ಪರ್ಧೆಯ ಪೋಸ್ಟರ್‌ಗಳನ್ನು ಮಂಗಳವಾರ ಸಿದ್ಧಗಂಗಾ ಮಠದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.

ಎಲ್ಲರಿಗೂ ಶಿಕ್ಷಣ ಸಿಗುವ ದೃಷ್ಟಿಯಿಂದ ಈಗಾಗಲೇ ದೇಶದಲ್ಲಿ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಜಾರಿಯಲ್ಲಿದೆ, ಪ್ರಸ್ತುತ ಹಲವು ತಜ್ಞರು ಸಾಕಷ್ಟು ಚರ್ಚೆ ನಡೆಸಿ ನೂತನ ಶಿಕ್ಷಣ ನೀತಿ ರೂಪಿಸಿದ್ದು ಈ ಬಗ್ಗೆ ಎಲ್ಲರೂ ಅರಿವು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ರಾಮಕೃಷ್ಣ ಆಶ್ರಮದಲ್ಲಿ ಪೋಸ್ಟರ್ ಬಿಡುಗಡೆ ಮಾಡಿದ ಡಾ.ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ಪಸ್ತುತ ಬದಲಾಗುತ್ತಿರುವ ಪ್ರಪಂಚದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಅಭಿವೃದ್ಧಿ ಸಾಧಿಸುವುದು ಅಗತ್ಯವಾಗಿದೆ, ಇದಕ್ಕೆ ನೂತನ ಶಿಕ್ಷಣ ನೀತಿ ಪೂರಕವಾಗಿದೆ ಎಂದರು.

ವಿವಿ ಸಿಂಡಿಕೇಟ್ ಸದಸ್ಯರಾದ ಆರ್.ಕೆ.ಶ್ರೀನಿವಾಸ್, ಟಿ.ಎಸ್.ಸುನೀಲ್‌ಪ್ರಸಾದ್, ತಿಪಟೂರು ರಾಜು, ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಪ್ರದೀಪ್‌ಕುವಾರ್ ಇದ್ದರು.

ಸೆ.25ರಿಂದ ಅ.2ರವರೆಗೆ ಸ್ಪರ್ಧೆ: ನೂತನ ಶಿಕ್ಷಣ ನೀತಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೂ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಜಾರಿಯ ಉದ್ದೇಶ ಹೊಂದಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಕಾರ್ಯಪಡೆ ರಚಿಸಿದೆ, ಇದಕ್ಕೆ ಸಂಬಂಧಿಸಿದಂತೆ ಹೆಚ್ಚು ಜನರನ್ನು ತಲುಪುವ ಉದ್ದೇಶ ಹಾಗೂ ಪರಿಣಾಮಕಾರಿ ಜಾರಿಗೆ ಸ್ಪರ್ಧೆ ಗಳನ್ನು ಆಯೋಜಿಸುತ್ತಿದೆ ಎಂದು ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ತಿಳಿಸಿದರು. ರಾಷ್ಟ್ರಾದ್ಯಂತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸೆ.25ರಿಂದ ಅ.2ರ ವರೆಗೂ ನಡೆಯಲಿದೆ, ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಸಾರ್ವ ಜನಿಕರು ಭಾಗವಹಿಸಲು ಅವಕಾಶವಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net