ಡಾ.ತಲ್ಲೂರು ಶಿವರಾಮ ಶೆಟ್ಟಿ ರೆಡ್‌ಕ್ರಾಸ್ ಸಭಾಪತಿ

thallur
Published on

ಉಡುಪಿ: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕದ ನೂತನ ಸಭಾಪತಿಯಾಗಿ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ರೆಡ್‌ಕ್ರಾಸ್ ಭವನದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ, ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಅವಿಶ್ವಾಸ ಗೊತ್ತುವಳಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಜಿಲ್ಲಾ ಘಟಕದ ಆಡಳಿತ ಮಂಡಳಿಯ 6 ಮಂದಿ ಸದಸ್ಯರು ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಖಜಾಂಚಿ ಟಿ. ಚಂದ್ರಶೇಖರ್ ಮೇಲೆ ಅವಿಶ್ವಾಸ ಗೊತ್ತುವಳಿ ನಡೆಸುವಂತೆ ಕೋರಿದ್ದರು.

ಬಸ್ರೂರು ರಾಜೀವ್ ಶೆಟ್ಟಿ ಪರ 4 ಸದಸ್ಯರು ಹಾಗೂ ವಿರುದ್ಧ 6 ಸದಸ್ಯರು ಕೈ ಎತ್ತಿದರು. ಗೊತ್ತುವಳಿಗೆ ಜಯ ಲಭಿಸುವ ಮೂಲಕ ಸಭಾಪತಿ ಸ್ಥಾನದಿಂದ ಬಸ್ರೂರು ರಾಜೀವ ಶೆಟ್ಟಿ ಅವರನ್ನು ತೆರವುಗೊಳಿಸಲಾಯಿತು.

ತೆರವುಗೊಂಡ ಸಭಾಪತಿ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆದು ಶಿವರಾಮ ಶೆಟ್ಟಿ ಆಯ್ಕೆಯಾದರು. ಜಿಲ್ಲಾ ಘಟಕದ ಉಪಾಧ್ಯಕ್ಷ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net