ಹೊಸ ಇಂದಿರಾ ಕ್ಯಾಂಟೀನ್ ಊಟ ಸವಿದ ಜನ

Maski Indira Cantien
ಮಸ್ಕಿಯಲ್ಲಿ ಇಂದಿರಾ ಕ್ಯಾಂಟೀನನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಉದ್ಘಾಟಿಸಿದರು. ತಹಸೀಲ್ದಾರ ಡಾ.ಮಲ್ಲಪ್ಪ ಕೆ.ಯರಗೋಳ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಮೆಹಬೂಬ್‌ಸಾಬ್ ಮುದ್ದಾಪುರ, ಬಸನಗೌಡ ಪೊಲೀಸ್ ಪಾಟೀಲ್. ಎಂ.ಅಮರೇಶ, ಸುಗಪ್ಪ ಮರಳದ ನರಸರಡ್ಡಿ ಇದ್ದರು.
Published on

ಮಸ್ಕಿ: ಪಟ್ಟಣದ ಲಿಂಗಸುಗೂರು ರಸ್ತೆಯಲ್ಲಿ ವರ್ಷದ ಹಿಂದೆ ನಿರ್ಮಿಸಿದ್ದ ಇಂದಿರಾ ಕ್ಯಾಂಟೀನನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಸೋಮವಾರ ಉದ್ಘಾಟಿಸಿದ್ದು, ಕಾರ್ಮಿಕರು, ವಿದ್ಯಾರ್ಥಿಗಳು, ಬಡವರ ಹಸಿವು ನೀಗಿಸಲು ಅನುಕೂಲವಾಗಿದೆ.

ಉದ್ಘಾಟನೆ ವೇಳೆ ಗಾಂದಿನಗರ, ಹೊಸ ಬಸ್ ನಿಲ್ದಾಣ ಹಾಗೂ ಇತರ ಕಡೆಯಿಂದ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರಯಾಣಿಕರು ಆಗಮಿಸಿ ಮೊದಲ ದಿನ ಊಟ ಸವಿದರು. ಶಾಸಕ ಆರ್.ಬಸನಗೌಡ ತುರ್ವಿಹಾಳ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಪುರಸಭೆ ಸದಸ್ಯ ದೊಡ್ಡಕರಿಯಪ್ಪ, ಕಾಂಗ್ರೆಸ್ ಮುಖಂಡರಾದ ಬಸನಗೌಡ ಪೊಲೀಸ್ ಪಾಟೀಲ್ ಊಟ ಬಡಿಸಿದರು.

ತಹಸೀಲ್ದಾರ್ ಡಾ.ಮಲ್ಲಪ್ಪ ಯರಗೋಳ, ಪುರಸಭೆ ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣ, ಗ್ಯಾರಂಟಿ ಅನುಷ್ಠಾನ ಸಮತಿ ತಾಲೂಕು ಅಧ್ಯಕ್ಷ ಮೆಹಬೂಬ್‌ಸಾಬ್ ಮುದ್ದಾಪುರ, ಮುಖಂಡರಾದ ಅಂದಾನಪ್ಪ ಗುಂಡಳ್ಳಿ, ದೊಡ್ಡಪ್ಪ ಕಡಬೂರು, ಎಂ.ಅಮರೇಶ, ಸುಗಪ್ಪ ಮರಳದ, ಬಸಪ್ಪ ಬ್ಯಾಳಿ, ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net