

ಮಂಗಳೂರು : ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಗುರುವಾರ ಮುಡಿಪು ಕುರ್ನಾಡು ಸಮೀಪದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣದ ಕಾಮಗಾರಿ ಪರಿಶೀಲಿಸಿದರು.ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಆವರಣ ಗೋಡೆ ಸಹಿತ ಅತ್ಯುನ್ನತ ಭದ್ರತಾ ವ್ಯವಸ್ಥೆ ನೂತನ ಕಾರಾಗೃಹ ಸಂಕೀರ್ಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು. ಕಾರಾಗೃಹ ಇಲಾಖೆ ಡಿಐಜಿ ದಿವ್ಯಶ್ರೀ ಅವರು ಸಚಿವರಿಗೆ ವಿವರ ನೀಡಿದರು.
ಶಾಸಕ ಅಶೋಕ್‌ಕುಮಾರ್ ರೈ, ಎಂಎಲ್‌ಸಿಗಳಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಪೋಲಿಸ್ ಮಹಾ ನಿರ್ದೇಶಕ ಎಂ.ಎ.ಸಲೀಂ , ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಉಪಸ್ಥಿತರಿದ್ದರು.