ಹೊಸ ಕಾನೂನು ಜಾರಿಗೆ ತರುವುದು ಬೇಡ

17Manju4-Web
ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಚಾಲಕರು ಪ್ರತಿಭಟಿಸಿದರು. ಲಕ್ಷ್ಮಣ ನಾಯಿಕ, ರಾಜಶೇಖರ ಹೊಸಮನಿ, ಮಲ್ಲಿಕಾರ್ಜುನ ಬಜೆ, ರವಿ ಕಾಳಿನಟ್ಟಿ ಇತರರಿದ್ದರು.
Published on

ಬೆಳಗಾವಿ: ಕೇಂದ್ರ ಸರ್ಕಾರವು ಹಿಟ್ ಮತ್ತು ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಕಾನೂನು ಜಾರಿಗೆ ತರಲು ಹೊರಟಿರುವುದನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಚಾಲಕರು ಪ್ರತಿಭಟಿಸಿದರು. ಅಜಾಗರೂಕ ಚಾಲನೆಯಿಂದ ಡಿಕ್ಕಿ ಹೊಡೆದು ಪೊಲೀಸ್ ಅಥವಾ ಸ್ಥಳೀಯ ಆಡಳಿತಕ್ಕೆ ತಿಳಿಸದೆ ಸ್ಥಳದಿಂದ ಪರಾರಿಯಾಗುವ ಚಾಲಕರಿಗೆ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ. ದಂಡ ವಿಧಿಸುವ ಹೊಸ ಕಾಯ್ದೆ ಅವೈಜ್ಞಾನಿಕವಾಗಿದ್ದು, ಕೂಡಲೇ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷ ಲಕ್ಷ್ಮಣ ನಾಯಿಕ, ರಾಜಶೇಖರ ಹೊಸಮನಿ, ಮಲ್ಲಿಕಾರ್ಜುನ ಬಜೆ, ರವಿ ಕಾಳಿನಟ್ಟಿ, ಶಿವಾನಂದ ಸೊಲಬನ್ನವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net