ಮೈಕ್ರೋ ಫೈನಾನ್ಸ್​ಗಳ ಕಡಿವಾಣಕ್ಕೆ ನೂತನ ಕಾಯ್ದೆ ಜಾರಿ

H K Patil_
Published on

ಗದಗ: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಂಧೆ ಹಾಗೂ ಮೀಟರ್ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ತರಲು ಸರಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ಮುಂದಿನ ಅಧಿವೇಶನದಲ್ಲಿಯೇ ಈ ಬಗ್ಗೆ ವಿಧೇಯಕ ಮಂಡಿಸಲಾಗುವುದು. ಬಡವರ, ಮಧ್ಯಮ ವರ್ಗದವರ ಶೋಷಣೆ ತಡೆಗಟ್ಟುವುದು ಹಾಗೂ ಅವರನ್ನು ಸಂರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net